ಬೆಂಗಳೂರು[ಮಾ. 18]  ಕಿಚ್ಚ ಸುದೀಪ್ ಟ್ವಿಟರ್ ನಲ್ಲಿ ಸಮುಲತಾ ಅವರಿಗೆ ಶುಭ ಕೋರಿದ್ದಾರೆ. ಸುಮಲತಾ ಅವರ ಪರ ಬ್ಯಾಟ್ ಬೀಸಿರುವ ಸುದೀಪ್ ಅಂಬರೀಶ್ ಅವರನ್ನು ನಾನು ಬಹಳ ಹತ್ತಿರದಿಂದ ಬಲ್ಲವನು. ಅವರನ್ನು ಬೆಂಬಲಿಸಿಕೊಂಡು ಬಂದು ಶಕ್ತಿ ನೀಡಿದ್ದ ಜನ ನಿಮ್ಮನ್ನು ಈ ಸಾರಿ ಕೈ ಹಿಡಿಯಲಿದ್ದಾರೆ ಎಂಬ ವಿಶ್ವಾಸ ಇದೆ. ಮತ್ತೊಮ್ಮೆ ನಿಮಗೆ ಒಳ್ಳೆಯದಾಗಲಿ ಎಂದು ಆಶಿಸುತ್ತೇನೆ ಎಂದಿದ್ದಾರೆ.

ಸೋಮವಾರ ಬೆಳಗ್ಗೆ ಸುದ್ದಿಗೋಷ್ಠಿ ನಡೆಸಿದ ಸುಮಲತಾ ಜತೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ರಾಕಿಂಗ್ ಸ್ಟಾರ್ ಯಶ್ ಇದ್ದರು. ರಾಕ್ ಲೈನ್ ವೆಂಕಟೇಶ್ ಬೆಂಬಲವಾಗಿ ನಿಂತಿದ್ದರು. ಈಗ ಕಿಚ್ಚ ಸುದೀಪ್ ಸಹ ಸುಮಲತಾ ಅವರಿಗೆ ಬೆಂಬಲ ನೀಡಿದ್ದಾರೆ.

ಟೈಮ್ಸ್ ನೌ ಲೋಕಸಭಾ ಚುನಾವಣಾ ಸಮೀಕ್ಷೆ: ಕರ್ನಾಟಕದಲ್ಲಿ ಯಾರಿಗೆ ಎಷ್ಟು ಸ್ಥಾನ..?

ದೇಶದಲ್ಲಿ ಏ.11 ರಿಂದ ಮೇ 19ರವರೆಗೆ ಏಳು ಹಂತಗಳಲ್ಲಿ ಮತದಾನ ನಡೆಯಲಿದ್ದು, ಕರ್ನಾಟಕದಲ್ಲಿ ಏ.18 ಹಾಗೂ ಏ.23ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ.