ಚುನಾವಣೆ ನೀತಿ ಸಂಹಿತೆ ಜಾರಿಯಾಗಿದ್ದರೂ ಅನುಮತಿ ಪಡೆಯದೆ ಪ್ರಚಾರಕ್ಕೆ ಬಳಕೆ ಮಾಡಿಕೊಂಡಿದ್ದ ಸಚಿವ  ಸಿ.ಪುಟ್ಟರಂಗಶೆಟ್ಟಿ ಅವರ ಫಾರ್ಚೂನರ್ ಕಾರನ್ನು ವಶಕ್ಕೆ ಪಡೆಯಲಾಗಿದೆ. 

ಯಳಂದೂರು: ಚುನಾವಣೆ ನೀತಿ ಸಂಹಿತೆ ಜಾರಿಯಾಗಿದ್ದರೂ ಅನುಮತಿ ಪಡೆಯದೆ ಪ್ರಚಾರಕ್ಕೆ ಬಳಕೆ ಮಾಡಿಕೊಂಡಿದ್ದ ಸಚಿವ ಸಿ.ಪುಟ್ಟರಂಗಶೆಟ್ಟಿ ಅವರ ಫಾರ್ಚೂನರ್ ಕಾರನ್ನು ಚುನಾವಣಾಧಿಕಾರಿಗಳು ಭಾನುವಾರ ವಶಪಡಿಸಿಕೊಂಡಿದ್ದಾರೆ.

ಸರ್ಕಾರಿ ಕಾರು ಬಳಸಲು ಅನುಮತಿ ಇಲ್ಲದೆ ಇರುವುದರಿಂದ ಅಧಿಕಾರಿಗಳ ತಂಡ ಸಚಿವರಿಗೆ ಅನೇಕ ಬಾರಿ ಎಚ್ಚರಿಕೆ ನೀಡಿದರೂ ನಿಯಮ ಉಲ್ಲಂಘನೆ ಮಾಡಿ ಸಂಚಾರ ಮಾಡುತ್ತಿದ್ದರು. 

ಭಾನುವಾರ ಜಿಲ್ಲೆಯ ಯಳಂದೂರು ತಾಲೂಕಿನ ಯರಗಂಬಳ್ಳಿಯಲ್ಲಿ ಚುನಾವಣೆ ಪ್ರಚಾರ ಮಾಡುವ ವೇಳೆ ಕಾರನ್ನು ಜಪ್ತಿ ಮಾಡಲಾಗಿದೆ. ಈ ವೇಳೆ ಯಳಂದೂರು ತಾಲೂಕಿನ ಯರಂಗಬಳ್ಳಿಯಲ್ಲಿ ಬಳಿ ಜಪ್ತಿ ಮಾಡಿದ್ದರಿಂದ ಬೆಂಬಲಿಗರ ಕಾರಲ್ಲಿ ಸಚಿವರು ತೆರಳಿದ್ದಾರೆ.