ಬೆಂಗಳೂರು(ಮೇ.19): ಲೋಕಸಭೆ ಚುನಾವಣೆಗೆ ಇಂದು ಏಳನೇಯ ಮತ್ತು ಕೊನೆಯ ಹಂತದ ಮತದಾನ ಪ್ರಕ್ರಿಯೆ ಮುಕ್ತಾಯ ಕಂಡಿದೆ. ಇದೀಗ ದೇಶದ ಚಿತ್ತ ಮೇ.23ರ ಫಲಿತಾಂಶದತ್ತ ನೆಟ್ಟಿದೆ. ಈ ಮಧ್ಯೆ ದೇಶದ ಪ್ರಮುಖ ವಿವಿಧ ಸುದ್ದಿವಾಹಿನಿಗಳು ಹಾಗೂ ಸಂಸ್ಥೆಗಳು ಚುನಾವಣೋತ್ತರ ಸಮೀಕ್ಷೆ ಹೊರಗಡೆವಿದ್ದು, ವಿವಿಧ ಚುನಾವಣೋತ್ತರ ಸಮೀಕ್ಷೆಗಳ ಅಂಕಿ ಅಂಶ ಇಲ್ಲಿದೆ.

NEWSX ಸಮೀಕ್ಷೆ:

NEWSX ಸಮೀಕ್ಷೆ ಪ್ರಕಾರ ಎನ್​ಡಿಎ ಮೈತ್ರಿ ಕೂಟಕ್ಕೆ 298 ಸ್ಥಾನಗಳು ದೊರೆಯಲಿವೆ. ಅದರಂತೆ ಯುಪಿಎ 118 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದ್ದು, 126 ಸ್ಥಾನಗಳಲ್ಲಿ ಪಕ್ಷೇತರರು ಗೆಲುವು ಸಾಧಿಸಲಿದ್ದಾರೆ.

250 ಸ್ಥಾನಗಳಲ್ಲಿ ಬಿಜೆಪಿ ಜಯ ದಾಖಲಿಸಿದರೆ, ಕಾಂಗ್ರೆಸ್ 76 ಸ್ಥಾನಗಳನ್ನು ಗಳಿಸಲಿದೆ.​ 

ಗೆದ್ದವರಾರು? ಬಿದ್ದವರಾರು ? ಮಹಾಸಂಗ್ರಾಮದ ಮಹಾಫಲಿತಾಂಶ. ಗುರುವಾರ 23 ಮೇ.