ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ಅಭ್ಯರ್ಥಿಗಳು ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಇದೇ ವೇಳೆ ಮಂಡ್ಯ ಜೆಡಿಎಸ್ ಅಭ್ಯರ್ಥಿಯಾಗಿರುವ ನಿಖಿಲ್ ಕುಮಾರಸ್ವಾಮಿ ಪ್ರಚಾರದ ವೇಳೆ ಭಾವೋದ್ವೇಗಕ್ಕೆ ಒಳಗಾದರು. 

ಮಂಡ್ಯ: ಜನ ಬೆಂಬಲ ಸಹಿಸದೇ ವಿರೋಧಿಗಳು ನನ್ನ ವಿರುದ್ಧ ಇಲ್ಲಸಲ್ಲದ ಅಪಪ್ರಚಾರ ನಡೆಸುತ್ತಿದ್ದಾರೆ ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಗದ್ಗದಿತರಾದರು. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮದ್ದೂರು ತಾಲೂಕಿನ ಎಚ್.ಹೊಸೂರು ಗ್ರಾಮದಲ್ಲಿ ಎತ್ತಿನ ಗಾಡಿಯಲ್ಲಿ ರೋಡ್ ಶೋ ನಡೆಸಿ ಭಾಷಣ ಮಾಡುವ ವೇಳೆ ಕಣ್ಣಂಚಿನಲ್ಲಿ ನೀರು ತುಂಬಿಕೊಂಡ ನಿಖಿಲ್, ಈಚುನಾವಣೆಯಲ್ಲಿ ನನ್ನನ್ನು ಹಣಿಯಲು ವಿರೋಧಿಗಳು ತಂತ್ರ ರೂಪಿಸಿದ್ದಾರೆ. ಅದು ಎಂದಿಗೂ ಫಲಿಸುವುದಿಲ್ಲ ಎಂದು ಭಾವುಕರಾದರು. 

ಸೋಮನಹಳ್ಳಿಯಲ್ಲಿ ಸುದ್ದಿ ಗಾರರೊಂದಿಗೆ ಮಾತನಾಡಿದ ನಿಖಿಲ್, ಮುಖ್ಯಮಂತ್ರಿ ಕುಮಾರಸ್ವಾಮಿ ಜಿಲ್ಲಾಧಿಕಾರಿ ಕಚೇರಿಯನ್ನು ನಡೆಸುತ್ತಿದ್ದಾರೆ ಎನ್ನುವುದಕ್ಕೆ ಸಾಕ್ಷಿ ಏನಿದೆ? ಎಂದರು.

ಮತದಾನ ನಮ್ಮ ಹಕ್ಕು... ಪ್ರಜಾಪ್ರಭುತ್ವದ ಉತ್ಸವವನ್ನು ಯಶಸ್ವಿಗೊಳಿಸೋಣ...

ದೇಶದಲ್ಲಿ ಏ.11 ರಿಂದ ಮೇ 19ರವರೆಗೆ ಏಳು ಹಂತಗಳಲ್ಲಿ ಮತದಾನ ನಡೆಯಲಿದ್ದು, ಕರ್ನಾಟಕದಲ್ಲಿ ಏ.18 ಹಾಗೂ ಏ.23ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. 543 ಲೋಕಸಭಾ ಕ್ಷೇತ್ರಗಳಿಗೆ ನಡೆ