ರಾಜ್ಯದಲ್ಲಿ ಏ.18ರಂದು ನಡೆಯುವ ಮೊದಲ ಹಂತದ ಲೋಕಸಭಾ ಚುನಾವಣೆಗೆ ದಿನ ಹತ್ತಿರವಾಗುತ್ತಿದ್ದಂತೆಯೇ ಪ್ರಚಾರದ ಭರಾಟೆ ಉತ್ತುಂಗಕ್ಕೇರಿದೆ. ಈ ನಿಟ್ಟಿನಲ್ಲಿ ಇಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ರಾಜ್ಯಕ್ಕೆ ಆಗಮಿಸಿ ಸಮಾವೇಶದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. 

ಬೆಂಗಳೂರು : ರಾಜ್ಯದಲ್ಲಿ ಏ.18ರಂದು ನಡೆಯುವ ಮೊದಲ ಹಂತದ ಲೋಕಸಭಾ ಚುನಾವಣೆಗೆ ದಿನ ಹತ್ತಿರವಾಗುತ್ತಿದ್ದಂತೆಯೇ ಪ್ರಚಾರದ ಭರಾಟೆ ಉತ್ತುಂಗಕ್ಕೇರಿದೆ. ಕಾಂಗ್ರೆಸ್‌ ಹಾಗೂ ಬಿಜೆಪಿಯ ಪ್ರಧಾನಿ ಅಭ್ಯರ್ಥಿಗಳು ಇಂದು ರಾಜ್ಯಕ್ಕಾಗಮಿಸುತ್ತಿದ್ದು, ಒಟ್ಟಾರೆ ಐದು ಬೃಹತ್‌ ಸಮಾವೇಶಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಅದರ ವಿವರ ಇಲ್ಲಿದೆ.

ಚಿತ್ರದುರ್ಗ, ಮಂಡ್ಯ, ಕೋಲಾರದಲ್ಲಿಂದು ರಾಹುಲ್‌ ಪ್ರಚಾರ

ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರು ಶನಿವಾರ ರಾಜ್ಯದಲ್ಲಿ ಮೂರು ಕಡೆ ಪ್ರಚಾರ ನಡೆಸಲಿದ್ದಾರೆ. ಮೊದಲಿಗೆ ಕೋಲಾರ, ಬಳಿಕ ಚಿತ್ರದುರ್ಗದಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿರುವ ರಾಹುಲ್‌, ದಿನದಂತ್ಯಕ್ಕೆ ಮಂಡ್ಯ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ಮೈಸೂರು ಜಿಲ್ಲೆಯ ಕೆ.ಆರ್‌.ನಗರದಲ್ಲಿ ಬೃಹತ್‌ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಪುತ್ರ ಜೆಡಿಎಸ್‌ ಅಭ್ಯರ್ಥಿ ನಿಖಿಲ್‌ ಪರ ಪ್ರಚಾರ ನಡೆಸಲಿದ್ದಾರೆ. ರಾಹುಲ್‌ ಪ್ರವಾಸ ವಿವರ ಇಂತಿದೆ.

ಮಧ್ಯಾಹ್ನ 12: ಕೋಲಾರದಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಪ್ರಚಾರ ಸಭೆಯಲ್ಲಿ ಭಾಗಿ. ಕೆ.ಎಚ್‌.ಮುನಿಯಪ್ಪ ಪರ ಮತಯಾಚನೆ

ಅಪರಾಹ್ನ 3: ಚಿತ್ರದುರ್ಗಕ್ಕೆ ತೆರಳಿ ಚುನಾವಣಾ ರಾರ‍ಯಲಿಯಲ್ಲಿ ಭಾಗಿ. ಕಾಂಗ್ರೆಸ್‌ ಅಭ್ಯರ್ಥಿ ಬಿ.ಎನ್‌.ಚಂದ್ರಪ್ಪ ಪರ ಪ್ರಚಾರ

ಸಂಜೆ 5 ಗಂಟೆ: ಮಂಡ್ಯ ಕ್ಷೇತ್ರ ವ್ಯಾಪ್ತಿಗೆ ಬರುವ ಮೈಸೂರು ಜಿಲ್ಲೆ ಕೆ.ಆರ್‌.ನಗರದಲ್ಲಿ ಜೆಡಿಎಸ್‌ನ ನಿಖಿಲ್‌ ಪರ ಪ್ರಚಾರ