ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ರಾಜ್ಯದಲ್ಲಿ ಕ್ಷಣಗಣನೆ ಆರಂಭವಾದ ಈ ಸಂದರ್ಭದಲ್ಲಿ ನಟ ಹಾಗೂ ಬೆಂಗಳೂರು ಕೇಂದ್ರ ಅಭ್ಯರ್ಥಿ ಪ್ರಕಾಶ್ ರೈ ಸುಮಲತಾ ಅಂಬರೀಶ್ ಗೆ ಬೆಂಬಲ ನೀಡಿದ್ದಾರೆ. 

ಬೆಂಗಳೂರು : ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಸುಮಲತಾ ಅಂಬರೀಶ್‌ ಅವರು ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿಗಿಂತ ಉತ್ತಮ ಆಯ್ಕೆ ಎಂದು ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಪ್ರಕಾಶ್‌ ರೈ ತಿಳಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ರಾಜಕೀಯದ ಬಗ್ಗೆ ಸುಮಲತಾ ಅವರಿಗೆ ಸ್ಪಷ್ಟತೆ ಇದೆ. ಅನುಭವ, ವಿಚಾರ ಲಹರಿ, ವಯಸ್ಸು, ಪ್ರಬುದ್ಧತೆ ಸೇರಿದಂತೆ ಎಲ್ಲಾ ವಿಷಯಗಳ ಬಗ್ಗೆ ಅವಲೋಕಿಸಿದರೆ ನಿಖಿಲ್‌ಗಿಂತ ಸುಮಲತಾ ಆಯ್ಕೆಯ ಉತ್ತಮ ಎಂದರು.

ಕುಟುಂಬ ರಾಜಕಾರಣವನ್ನು ವಿರೋಧಿಸುವುದಿಲ್ಲ. ಆದರೆ, ಅರ್ಹತೆ ಇರಬೇಕು. ಅರ್ಹತೆ ಇದ್ದಲ್ಲಿ ಕುಟುಂಬ ರಾಜಕಾರಣ ತಪ್ಪಲ್ಲ. ಮತದಾನದಿಂದ ಯಾರೂ ದೂರ ಉಳಿಯಬಾರದು. ಅಭ್ಯರ್ಥಿಯನ್ನು ನೋಡಿ ಮತ ಹಾಕಬೇಕು. ಒಂದು ವೇಳೆ ಅಭ್ಯರ್ಥಿಗಳು ಇಷ್ಟವಿಲ್ಲದಿದ್ದರೆ ಚುನಾವಣಾ ಆಯೋಗವು ನೋಟಾ ಆಯ್ಕೆ ನೀಡಿದೆ ಎಂದರು.

ದೇಶದಲ್ಲಿ ಏ.11 ರಿಂದ ಮೇ 19ರವರೆಗೆ ಏಳು ಹಂತಗಳಲ್ಲಿ ಮತದಾನ. ಕರ್ನಾಟಕದಲ್ಲಿ ಏ.18 ಹಾಗೂ ಏ.23ರಂದು ಎರಡು ಹಂತಗಳಲ್ಲಿ ಮತದಾನ. ಭಾರತದಲ್ಲಿ 543 ಲೋಕಸಭಾ ಕ್ಷೇತ್ರ, ಕರ್ನಾಟಕದಲ್ಲಿ 28.