ಕೊಪ್ಪಳ : ಸಿಎಂ ಕುಮಾರಸ್ವಾಮಿ ವರ್ತನೆ ಸರಿಯಾಗಿಲ್ಲ. ಹಗುರವಾಗಿ ಮಾತನಾಡುವ ಮೂಲಕ  ವಾತಾವರಣ ತಮ್ಮ ಪರವಾಗಿ ಇಲ್ಲ ಎನ್ನುವುದನ್ನು ತೋರಿಸಿಕೊಳ್ಳುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. 

ಕೊಪ್ಪಳದಲ್ಲಿ ಮಾತನಾಡಿದ ಅವರು ಕೇಂದ್ರ ಸರ್ಕಾರದ ಸಾಧನೆ, ರಾಜ್ಯ ಸರ್ಕಾರದ ವೈಫಲ್ಯ, ರಾಜ್ಯದಲ್ಲಿ ಹಿಂದೆ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರದ ಸಾಧನೆಯೇ ರಾಜ್ಯದಲ್ಲಿ ಗೆಲ್ಲಲು ಕಾರಣವಾಗಲಿದೆ ಎಂದರು. 

ಡಿಕೆಶಿ - ಎಂ.ಬಿ.ಪಾಟೀಲ್ ರ ಲಿಂಗಾಯತರ ಪ್ರತ್ಯೇಕ‌ ಧರ್ಮದ ಪರ ವಿರೋಧ ಮಾತಿನ ಬಗ್ಗೆಯೂ ಪ್ರಸ್ತಾಪಿಸಿದ ಯಡಿಯೂರಪ್ಪ ಅದು ಅವರಿಬ್ಬರಿಗೆ ಬಿಟ್ಟ ವಿಚಾರ ಎಂದರು. 

ಇನ್ನು ಇದೇ ವೇಳೆ ಮಂಡ್ಯದಲ್ಲಿ ಶಿವರಾಮೇಗೌಡ ಸುಮಲತಾ ಮಾಯಾಂಗನೆ ಎಂದು ಹೇಳಿರುವ ವಿಚಾರದ ಬಗ್ಗೆಯೂ ಮಾತನಾಡಿ ಸೋಲುವ ಭೀತಿಯಿಂದ ಇಂತಹ ಹೇಳಿಕೆ ನೀಡುತ್ತಿದ್ದಾರೆ.  ಸಂಸದ ಶಿವರಾಮೇಗೌಡ ಹಗುರವಾಗಿ ಮಾತನಾಡುವುದಕ್ಕೆ ಹೆಸರಾದವರು. ಏನೇ ಆದರೂ ಕೂಡ ಮಂಡ್ಯದಲ್ಲಿ ಸುಮಲತಾ ಗೆಲುವು ಮಾತ್ರ ಖಚಿತ ಎಂದು ಬಿ.ಎಸ್.ಯಡಿಯೂರಪ್ಪ ಹೇಳಿದರು.

ದೇಶದಲ್ಲಿ ಏ.11 ರಿಂದ ಮೇ 19ರವರೆಗೆ ಏಳು ಹಂತಗಳಲ್ಲಿ ಮತದಾನ. ಕರ್ನಾಟಕದಲ್ಲಿ ಏ.18 ಹಾಗೂ ಏ.23ರಂದು ಎರಡು ಹಂತಗಳಲ್ಲಿ ಮತದಾನ. ಭಾರತದಲ್ಲಿ 543 ಲೋಕಸಭಾ ಕ್ಷೇತ್ರ, ಕರ್ನಾಟಕದಲ್ಲಿ 28.