ತುಮಕೂರು[ಮಾ. 22] ಈ ಬೆಳವಣಿಗೆ ತುಮಕೂರು ಮಾತ್ರ ಅಲ್ಲ ಇಡೀ ರಾಜ್ಯದ ರಾಜಕಾರಣದಲ್ಲಿ ಕುತೂಹಲ ಮೂಡಿಸಿದೆ.

ತುಮಕೂರಿನಿಂದ ಟಿಕೆಟ್ ವಂಚಿತ ಸಂಸದ ಮುದ್ದಹನುಮೇಗೌಡರು ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯುತ್ತಾರೋ ಎಂಬ ಪ್ರಶ್ನೆ ಮೂಡಿದೆ.

ಬೆಂಗಳೂರು ಗ್ರಾಮಾಂತರ ಬಿಜೆಪಿ ಸಂಭಾವ್ಯ ಅಭ್ಯರ್ಥಿ ನಿಶಾ ಯೋಗೇಶ್ವರ್ ಫೋಟೋಸ್!

ತುಮಕೂರು ಕಾಂಗ್ರೆಸ್ ಪಕ್ಷದಲ್ಲಿ ಬಂಡಾಯದ ಬಿಸಿ ಆರಂಭವಾಗಿದೆ. ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಸಂಸದ ಮುದ್ದಹನುಮೇಗೌಡ ಕಣಕ್ಕೆ ಇಳಿಯುವ ಸಂಬಂಧ ಶನಿವಾರ  ಬೆಂಬಲಿಗರ ಸಭೆ ನಡೆಸಿ ತೀರ್ಮಾನ ತೆಗೆದುಕೊಳ್ಳಲಿದ್ದಾರೆ. ತುಮಕೂರಿನಲ್ಲಿ ಕಾಂಗ್ರೆಸ್ ನಿಂದ ಗೆದ್ದ ಮುದ್ದಹನುಮೇಗೌಡರಿಗೆ ಟಿಕೆಟ್ ಸಿಕ್ಕಿರಲಿಲ್ಲ. ಮೈತ್ರಿ ಹಂಚಿಕೆಯಲ್ಲಿ ತುಮಕೂರು ಜೆಡಿಎಸ್ ಪಾಲಾಗಿತ್ತು