ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದೆ.ಇದೇ ವೇಳೆ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ಮತ್ತೊಮ್ಮೆ ಹಿನ್ನಡೆಯಾಗಿದೆ. 

ಗದಗ : ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ಲೋಕಸಭಾ ಚುನಾವಣೆ ಬೆನ್ನಲ್ಲೇ ಭಾರೀ ಹಿನ್ನಡೆ ಎದುರಾಗಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಲು ಗದಗ ಜಿಲ್ಲೆಯಲ್ಲಿ ಸಲ್ಲಿಸಿದ್ದ ಅರ್ಜಿ ತಿರಸ್ಕಾರವಾಗಿದೆ. ನಮೂನೆ 6 ರ ಅಡಿಯಲ್ಲಿ ಹೆಸರು ಸೇರ್ಪಡೆಗೆ ನೀಡಿದ್ದ ಅರ್ಜಿಯನ್ನು ತಹಶೀಲ್ದಾರ್ ತಿರಸ್ಕಾರ ಮಾಡಿದ್ದಾರೆ. 

ಶಾಸಕ ಶ್ರೀರಾಮುಲು ಅವರ ನಿವಾಸದಲ್ಲಿ ವಾಸವಿರುವುದಾಗಿ ಜನಾರ್ದನ ರೆಡ್ಡಿ ಅರ್ಜಿ ಸಲ್ಲಿಸಿದ್ದರು. ಆದರೆ ಇದೀಗ ಇಲ್ಲಿಯೂ ಕೂಡ ಅವಕಾಶ ದೊರೆಯಲಿಲ್ಲ. 

ಬಳ್ಳಾರಿ ಜಿಲ್ಲೆಗೆ ಪ್ರವೇಶ ನಿರ್ಬಂಧಿಸಲಾಗಿದ್ದು, ಈ ನಿಟ್ಟಿನಲ್ಲಿ ಗದಗದಲ್ಲಿ ಮತದಾರರ ಪಟ್ಟಿಗೆ ಹೆಸರು ನೊಂದಾವಣೆಗೆ ಅರ್ಜಿ ಸಲ್ಲಿಸಿದ್ದರು. 

ದೇಶದಲ್ಲಿ ಏ.11 ರಿಂದ ಮೇ 19ರವರೆಗೆ ಏಳು ಹಂತಗಳಲ್ಲಿ ಮತದಾನ. ಕರ್ನಾಟಕದಲ್ಲಿ ಏ.18 ಹಾಗೂ ಏ.23ರಂದು ಎರಡು ಹಂತಗಳಲ್ಲಿ ಮತದಾನ. ಭಾರತದಲ್ಲಿ 543 ಲೋಕಸಭಾ ಕ್ಷೇತ್ರ, ಕರ್ನಾಟಕದಲ್ಲಿ 28.