ಬೆಂಗಳೂರು : ಲೋಕಸಭಾ ಮಹಾ ಸಮರದ ಎಣಿಕೆ ಕಾರ್ಯ ಭರದಿಂದ ಸಾಗಿದೆ. 

ಬಿಜೆಪಿ ನಾಯಕರ ಭರವಸೆ ರಾಜ್ಯದಲ್ಲಿ ನಿಜವಾಗುವತ್ತ ಫಲಿತಾಂಶವು ಸಾಗುತ್ತಿದೆ. 

ರಾಜ್ಯದಲ್ಲಿ 22 ಸ್ಥಾನಗಳಲ್ಲಿ ಬಿಜೆಪಿ ವಿಜಯಗಳಿಸಲಿದೆ ಎಂದು ಬಿಜೆಪಿ ನಾಯಕರು ಚುನಾವಣಾ ಫಲಿತಾಂಶಕ್ಕೂ ಮುನ್ನವೇ ಭವಿಷ್ಯ ನುಡಿದಿದ್ದು,  ಇದೀಗ ಬಿಜೆಪಿ 23 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. 

ಇನ್ನು ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿಯಲ್ಲಿ ಚುನಾವಣೆ ಎದುರಿಸಿದ್ದು, ಸದ್ಯ ಕಾಂಗ್ರೆಸ್ 3 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡರೆ ಜೆಡಿಎಸ್ 1 ಹಾಗೂ ಪಕ್ಷೇತರ ಅಭ್ಯರ್ಥಿ 1 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. 

ಇದರಿಂದ ನಿರೀಕ್ಷೆ ನಿಜವಾಗುವತ್ತ ಫಲಿತಾಂಶ ಸಾಗಿದ್ದು 22 ಗಡಿ ದಾಟುವ ಸಾಧ್ಯತೆ ಇದೆ. ಅಲ್ಲದೇ ಇತ್ತ ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿರುವ ಸುಮಲತಾ ಗೆಲುವಿನತ್ತ ದಾಪುಗಾಲು ಹಾಕುತ್ತಿದ್ದು, ಒಟ್ಟು 23 ಸ್ಥಾನಗಳು ರಾಜ್ಯದಲ್ಲಿ ಬಿಜೆಪಿ ಪಾಲಾಗುವ ನಿರೀಕ್ಷೆ ಹೆಚ್ಚಾಗಿದೆ.