ನವದೆಹಲಿ: ಜಮ್ಮು-ಕಾಶ್ಮೀರದ ಅನಂತನಾಗ್‌ ಲೋಕಸಭಾ ಕ್ಷೇತ್ರವೊಂದಕ್ಕೇ 3 ಹಂತದ ಚುನಾವಣೆ ನಡೆಸಲು ಚುನಾವಣಾ ಆಯೋಗ ನಿರ್ಧರಿಸಿದೆ. 

ಭಯೋತ್ಪಾದಕರ ಹಾವಳಿಯಿರುವ ಕಾರಣ ಜಮ್ಮು-ಕಾಶ್ಮೀರ ಅತ್ಯಂತ ಸೂಕ್ಷ್ಮ ರಾಜ್ಯ ಎನ್ನಿಸಿಕೊಂಡಿದ್ದು, ಈ ಹಿನ್ನೆಲೆಯಲ್ಲಿ ಸೂಕ್ಷ್ಮ ಪ್ರದೇಶವಾದ ಅನಂತನಾಗ್‌ನಲ್ಲಿ ಭದ್ರತಾ ಕಾರಣಗಳಿಗಾಗಿ 3 ಹಂತದ ಚುನಾವಣೆ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಸುನೀಲ್‌ ಅರೋರಾ ಹೇಳಿದರು.