ನವದೆಹಲಿ(ಮೇ.23): ಕೇಂದ್ರದಲ್ಲಿ ಮತ್ತೊಮ್ಮೆ ಬಿಜೆಪಿ ನೇತೃತ್ವದ ಎನ್‌ಡಿಎ ಅಧಿಕಾರಕ್ಕೆ ಬರುವುದು ಖಚಿತವಾಗಿದೆ. ನರೇಂದ್ರ ಮೋದಿ ಸತತ ಎರಡನೇ ಬಾರಿ ದೇಶದ ಪ್ರಧಾನಿಯಾಗಿ ಅಧಿಕಾರ ನಡೆಸಲಿದ್ದಾರೆ.

ಇನ್ನು ಪ್ರಧಾನಿ ಮೋದಿ ಪ್ರಮಾಣವಚನಕ್ಕೆ ದಿನಾಂಕ ಕೂಡ ನಿಗದಿಯಾಗಿದ್ದು, ಇದೇ ಮೇ.29ರಂದು ಮೋದಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಇದೇ ವೇಳೆ ಮೋದಿ ಪ್ರಮಾಣವಚನ ಸಮಾರಂಭಕ್ಕೆ ರಷ್ಯಾ ಅಧ್ಯಕ್ಷ ವ್ಲಾದಿಮರ್ ಪುಟಿನ್ ವಿಶೇಷ ಅತಿಥಿಯಾಗಿ ಆಗಮಿಸಲಿದ್ದಾರೆ. ಪ್ರಮಾಣವಚನ ಸಮಾರಂಭಕ್ಕೆ ಬರುವಂತೆ ಖುದ್ದು ಮೋದಿ ಅವರೇ ಆಮಂತ್ರಣ ನೀಡಿದ್ದು, ಪುಟಿನ್ ಈ ಆಮಂತ್ರಣವನ್ನು ಒಪ್ಪಿಕೊಂಡಿದ್ದಾರೆ.