ಪಕ್ಷದ ವರಿಷ್ಠರ ವಿರುದ್ಧ ಮುನಿಸಿಕೊಂಡಿದ್ದ ಸಿಧುಗೆ ಸಿಹಿ ಸುದ್ದಿ| ರಾಹುಲ್ ಗಾಂಧಿ-ಅಹ್ಮದ್ ಪಟೇಲ್ ಭೇಟಿ ಮಾಡಿದ ನವಜೋತ್ ಸಿಂಗ್ ಸಿಧು| ಲೋಕಸಭೆ ಚುನಾವಣೆಯ ಪ್ರಚಾರದಲ್ಲಿ ತೊಡಗುವಂತೆ ಸಿಧುಗೆ ಸೂಚನೆ|
ನವದೆಹಲಿ(ಏ.08): ಕಳೆದ ಕೆಲವು ದಿನಗಳಿಂದ ಪಕ್ಷ ಮತ್ತು ನಾಯಕರ ಮೇಲೆ ಮುನಿಸಿಕೊಂಡಿದ್ದ ನವಜೋತ್ ಸಿಂಗ್ ಸಿಧು ಅವರಿಗೆ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ನೂತನ ಜವಾಬ್ದಾರಿ ನೀಡಿದ್ದಾರೆ.
ಪಂಜಾಬ್ ಸರ್ಕಾರದಲ್ಲಿ ಮಂತ್ರಿಯಾಗಿರುವ ಸಿಧು, ರಾಷ್ಟ್ರ ರಾಜಕಾರಣದಲ್ಲಿ ಗುರುತಿಸಿಕೊಳ್ಳಲು ಬಯಸಿದ್ದರು. ಅದರಂತೆ ಸಿಧು ಅವರಿಗೆ ಲೋಕಸಭಾ ಚುನಾವಣೆಯ ಪ್ರಚಾರದಲ್ಲಿ ತೊಡಗುವಂತೆ ರಾಹುಲ್ ಸೂಚನೆ ನೀಡಿದ್ದಾರೆ.
Scroll to load tweet…
ಇಂದು ನವದೆಹಲಿಯಲ್ಲಿ ರಾಹುಲ್ ಗಾಂಧಿ ಮತ್ತು ಅಹ್ಮದ್ ಪಟೇಲ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಸಿಧು, ಲೋಕಸಭೆ ಚುನಾವಣೆಯ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಳ್ಳುವಂತೆ ವರಿಷ್ಠರು ತಮಗೆ ಸೂಚನೆ ನೀಡಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.
