ನವದೆಹಲಿ[ಮಾ.25]: ಒಂದು ವೇಳೆ ಮುಂದಿನ ಚುನಾವಣೆಯಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ನರೇಂದ್ರ ಮೋದಿ ಅವರು ಶಾಶ್ವತವಾಗಿ ಪ್ರಧಾನಿ ಆಗಲಿದ್ದಾರೆ. 2019ರ ಬಳಿಕ ದೇಶದಲ್ಲಿ ಚುನಾವಣೆಯೇ ಇರುವುದಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಭಾನುವಾರ ಹೇಳಿದ್ದಾರೆ.

ಪುಸ್ತಕ ಬಿಡುಗಡೆ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಕೇಜ್ರಿವಾಲ್‌, ದೇಶದಲ್ಲಿ ಪ್ರಜಾಪ್ರಭುತ್ವ ಕೊನೆಗೊಳ್ಳುವ ಅಪಾಯ ಎದುರಾಗಿದೆ. ಮೋದಿ ಸರ್ಕಾರ ದೇಶವನ್ನು ನಡೆಸಲು ಜರ್ಮನಿಯ ಸರ್ವಾಧಿಕಾರಿ ಅಡಾಲ್ಫ್ ಹಿಟ್ಲರ್‌ ಅವರ ತಂತ್ರಗಳನ್ನು ಅನುಸರಿಸುತ್ತಿದೆ. ಇಂದು ಎಲ್ಲಾ ದೇಶ ಪ್ರೇಮಿಗಳು ಮೋದಿ ಸರ್ಕಾರ ಪುನಃ ಅಧಿಕಾರಕ್ಕೆ ಬರದಂತೆ ತಡೆಯುವ ಏಕೈಕ ಪ್ರೇರಣೆ ಹೊಂದಿರಬೇಕು ಎಂದಿದ್ದಾರೆ.

ಅಲ್ಲದೇ ಒಂದು ವೇಳೆ ಬಿಜೆಪಿ 2019ರಲ್ಲಿ ಪುನಃ ಅಧಿಕಾರಕ್ಕೆ ಬಂದರೆ, ಶಾಶ್ವತವಾಗಿ ಮೋದಿಯೇ ಪ್ರಧಾನಿ ಆಗಲಿದ್ದಾರೆ. ಬಳಿಕ ದೇಶದಲ್ಲಿ ಚುನಾವಣೆಯೇ ಇರುವುದಿಲ್ಲ ಎಂದು ಹೇಳಿದ್ದಾರೆ.

ಮತದಾನ ನಮ್ಮ ಹಕ್ಕು... ಪ್ರಜಾಪ್ರಭುತ್ವದ ಉತ್ಸವವನ್ನು ಯಶಸ್ವಿಗೊಳಿಸೋಣ...

ದೇಶದಲ್ಲಿ ಏ.11 ರಿಂದ ಮೇ 19ರವರೆಗೆ ಏಳು ಹಂತಗಳಲ್ಲಿ ಮತದಾನ ನಡೆಯಲಿದ್ದು, ಕರ್ನಾಟಕದಲ್ಲಿ ಏ.18 ಹಾಗೂ ಏ.23ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. 543 ಲೋಕಸಭಾ ಕ್ಷೇತ್ರಗಳಿಗೆ ನಡೆ