ನವದೆಹಲಿ : ಲೋಕಸಭಾ ಚುನಾವಣೆ ಸಮರ ದೇಶದಲ್ಲಿ ಜೋರಾಗಿದೆ. ದೇಶದ ಅತ್ಯಂತ ಪ್ರತಿಷ್ಠೆಯ ಕಣವಾದ ಪ್ರಧಾನಿ ನರೇಂದ್ರ ಮೋದಿ ಅವರ ಸ್ವ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ ಮಾಡಿದೆ. 

ಮೋದಿ ವಿರುದ್ಧ ಪ್ರಿಯಾಂಕ ಗಾಂಧಿ ಸ್ಪರ್ಧೆ ಮಾಡಲಿದ್ದಾರೆ ಎನ್ನುವ ವಿಚಾರ ಇಷ್ಟು ದಿನಗಳ ಚರ್ಚೆಯಾಗುತಿತ್ತು. ಆದರೆ ಇದೀಗ ವಾರಣಾಸಿ ಕ್ಷೇತ್ರದಿಂದ ಕಾಂಗ್ರೆಸ್ ಅಜಯ್ ರಾಯ್ ಅವರನ್ನು ಕಣಕ್ಕೆ ಇಳಿಸಿದೆ. ಈ ಮೂಲಕ ಪ್ರಿಯಾಂಕ ಸ್ಪರ್ಧೆ ಚರ್ಚೆಗೆ ಫುಲ್ ಸ್ಟಾಪ್ ಬಿದ್ದಂತಾಗಿದೆ. 

2014ರ ಲೋಕಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಮುಖಂಡ ಅರವಿಂದ್ ಕೇಜ್ರಿವಾಲ್ ನರೇಂದ್ರ ಮೋದಿ ವಿರುದ್ಧ ವಾರಣಾಸಿಯಿಂದ ಸ್ಪರ್ಧೆ ಮಾಡಿ ಪರಾಭವಗೊಂಡಿದ್ದರು.

ಇನ್ನು ಯೋಗಿ ಆದಿತ್ಯನಾಥ್ ಅವರ ಕ್ಷೇತ್ರಕ್ಕೂ ಕೂಡ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ ಮಾಡಿದೆ ಮಾಡಿದೆ. ಗೋರಕ್ ಪುರದಿಂದ ಕಾಂಗ್ರೆಸ್ ಮಧುಸೂದನ್ ತಿವಾರಿ ಅವರನ್ನು ಕಣಕ್ಕೆ ಇಳಿಸಿದೆ. 

ಮೇ 19 ವಾರಣಾಸಿ ಕ್ಷೇತ್ರಕ್ಕೆ ಚುನಾವಣೆ  ನಡೆಯಲಿದ್ದು, ಮೋದಿ ಏಪ್ರಿಲ್ 26 ರಂದು ನಾಮಪತ್ರ ಸಲ್ಲಿಸಲಿದ್ದಾರೆ.