ಕುಶಿನಗರ್(ಮೇ.12): ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸಲು ಸೇನೆ ಚುನಾವಣಾ ಆಯೋಗದ ಅನುಮತಿ ಪಡೆಯಬೇಕಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಉತ್ತರಪ್ರದೇಶದ ಕುಶಿನಗರದಲ್ಲಿ ಚುನಾವಣಾ ಪ್ರಚಾರ ಸಭೆ ಉದ್ದೇಶಿಸಿ ಮಾತನಾಡಿದ ಪ್ರಧಾನಿ, ಕಾಶ್ಮೀರದ ಸೋಪಿಯಾನ ಪ್ರದೇಶದಲ್ಲಿ ಇಂದು ನಡೆದ ಇಬ್ಬರು ಉಗ್ರರ ಎನ್‌ಕೌಂಟರ್ ಕುರಿತು ಪ್ರಸ್ತಾಪಿಸಿದರು. 

ಎಲ್ಲದಕ್ಕೂ ಚುನಾವಣಾ ಆಯೋಗದತ್ತ ಬೊಟ್ಟು ಮಾಡುತ್ತಿರುವ ಪ್ರತಿಪಕ್ಷಗಳು, ಸೈನಿಕರೂ ಕೂಡ ಆಯೋಗದ ಅನುಮತಿ ಪಡೆಯಬೇಕು ಎಂದು ಬಯಸಿದರೆ ಅಚ್ಚರಿಯಿಲ್ಲ ಮೋದಿ ವ್ಯಂಗ್ಯವಾಡಿದರು.

ಲೋಕಸಭೆ ಚುನಾವಣೆಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ