ಲೋಕಸಭೆ ಚುನಾವಣೆ ಹಿನ್ನೆಲೆ| ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ದೇಶ ಸುತ್ತುತ್ತಿರುವ ಮೋದಿ| 125 ದಿನಗಳಲ್ಲಿ ಬರೋಬ್ಬರಿ 200 ಕಾರ್ಯಕ್ರಮದಲ್ಲಿ ಭಾಗಿ| ಪ್ರಧಾನಿ ಮೋದಿ ವೆಬ್ ಸೈಟ್ ಮಾಹಿತಿ| ಬಹಿರಂಗ ಪ್ರಚಾರವೂ ಸೇರಿ ವಿವಿಧ ಕ್ಷೇತ್ರಗಳ ಗಣ್ಯರೊಂದಿಗೆ ಸಂವಾದ| 

ನವದೆಹಲಿ(ಮೇ.04): ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶದ ಮೂಲೆ ಮೂಲೆ ಸುತ್ತುತ್ತಿದ್ದು, ಕೇವಲ 125 ದಿನಗಳಲ್ಲಿ ಬರೋಬ್ಬರಿ 200 ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಪ್ರಧಾನಿ ಮೋದಿ ವೆಬ್ ಸೈಟ್, ಸಾರ್ವಜನಿಕ ಸಭೆ, ಸಮಾಜದ ವಿವಿಧ ವರ್ಗಗಳ ಜನರೊಂದಿಗೆ ಸಂವಾದ ಸೇರಿ ಒಟ್ಟು 200ಕ್ಕೂ ಹೆಚ್ಚಿನ ಕಾರ್ಯಕ್ರಮದಲ್ಲಿ ಮೋದಿ ಭಾಗವಹಿಸಿದ್ದಾರೆ ಎಂದು ತಿಳಿಸಿದೆ.

Scroll to load tweet…

ಬಹಿರಂಗ ಪ್ರಚಾರ ಸೇರಿದಂತೆ ರೈತರು, ವಿದ್ಯಾರ್ಥಿಗಳು, ವಿಜ್ಞಾನಿಗಳು, ಉದ್ಯಮಿಗಳು, ವಿದೇಶಿ ನಾಯಕರು, ಕಾರ್ಯಕರ್ತರು ಹೀಗೆ ವಿವಿಧ ಕ್ಷೇತ್ರಗಳ ಗಣ್ಯರೊಂದಿಗೆ ಮೋದಿ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

ಒಟ್ಟು 27 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪ್ರಧಾನಿ ಮೋದಿ ಚುನಾವಣಾ ಪ್ರಚಾರ ಮತ್ತು ಅಧಿಕೃತ ಸರ್ಕಾರಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಾರೆ ಎಂದು ವೆಬ್ ಸೈಟ್ ಮಾಹಿತಿ ನೀಡಿದೆ.

ಲೋಕಸಭೆ ಚುನಾವಣೆಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ