ನವದೆಹಲಿ(ಏ.20): ಮಾಲೆಗಾಂವ್ ಸ್ಫೋಟ ಪ್ರಕರಣದ ಆರೋಪಿ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಅವರನ್ನು ಭೋಪಾಲ್ ನಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಸಿದ್ದನ್ನು ಪ್ರಧಾನಿ ಮೋದಿ ಸಮರ್ಥಿಸಿಕೊಂಡಿದ್ದಾರೆ.

ದೇಶದ ಶ್ರೀಮಂತ ಹಿಂದೂ ನಾಗರಿಕತೆಯನ್ನು ಭಯೋತ್ಪಾದನೆಗೆ ಹೋಲಿಕೆ ಮಾಡಿದವರಿಗೆ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಸ್ಪರ್ಧೆ ಉತ್ತರ ಎಂದು ಪ್ರಧಾನಿ ಮೋದಿ ಅಭಿಪ್ರಾಯಪಟ್ಟಿದ್ದಾರೆ.

ಸಾಧ್ವಿ ಸ್ಪರ್ಧೆ ಕಾಂಗ್ರೆಸ್‌ಗೆ ದುಬಾರಿಯಾಗಿ ಪರಿಣಮಿಸಲಿದ್ದು, ಹಿಂದೂ ಭಯೋತ್ಪಾದನೆ ಎಂದು ಗುಲ್ಲೆಬ್ಬಿಸಿದ್ದ ಕಾಂಗ್ರೆಸ್‌ಗೆ ತಕ್ಕ ಶಾಸ್ತಿಯಾಗಲಿದೆ ಎಂದು ಮೋದಿ ಹೇಳಿದ್ದಾರೆ.

ಖಾಸಗಿ ಸುದ್ದಿವಾಹಿನಿಗೆ ಸಂದರ್ಶನ ನೀಡಿರುವ ಪ್ರಧಾನಿ, ರಾಯ್ ಬರೇಲಿ ಮತ್ತು ಅಮೇಥಿಯಿಂದ ಕಣಕ್ಕಿಳಿದಿರುವ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಕೂಡ ಕ್ರಿಮಿನಿಲ್ ಹಿನ್ನೆಲೆಯುಳ್ಳವರು ಎಂದು ಹೇಳುವ ಮೂಲಕ ಸಾಧ್ವಿ ಸ್ಪರ್ಧೆಯನ್ನು ಸಮರ್ಥಿಸಿಕೊಂಡರು.

ದೇಶದಲ್ಲಿ ಏ.11ರಿಂದ ಮೇ.19ರವೆರೆಗೆ ಏಳು ಹಂತಗಳಲ್ಲಿ ಮತದಾನ. ಕರ್ನಾಟಕದಲ್ಲಿ ಏ.18 ಹಾಗೂ ಏ.23ರಂಧು ಎರಡು ಹಂತಗಳಲ್ಲಿ ಮತದಾನ. ಭಾರತದಲ್ಲಿ 543 ಲೋಕಸಭಾ ಕ್ಷೇತ್ರ. ಕರ್ನಾಟಕದಲ್ಲಿ 28.