ಮೊರಾನ್(ಮಾ.30): ಅಸ್ಸಾಂ ಅಕಾರ್ಡ್‌ಗೆ ಎನ್‌ಡಿಎ ಸರ್ಕಾರ ಬದ್ಧವಾಗಿದ್ದು, ಅಸ್ಸಾಂ ನ 6 ಸಮುದಾಯಗಳಿಗೆ ಪರಿಶಿಷ್ಟ ಪಂಗಡ ಸ್ಥಾನಮಾನ ನೀಡಲು ಗಂಭೀರ ಚಿಂತನೆ ನಡೆದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಅಸ್ಸಾಂನ ಮೊರಾನ್‌ನಲ್ಲಿ ಚುನಾವಣಾ ಪ್ರಚಾರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ಅಸ್ಸಾಂ ಒಪ್ಪಂದ ಒಮ್ಮೆ ಜಾರಿಯಾದರೆ ಎಲ್ಲಾ ಅಕ್ರಮ ವಲಸಿಗರನ್ನೂ ಅವರ ಧರ್ಮವನ್ನು ಲೆಕ್ಕಿಸದೇ ರಾಜ್ಯದಿಂದ ಗಡಿಪಾರು ಮಾಡಲಾಗುವುದು ಎಂದು ಭರವಸೆ ನೀಡಿದರು. 

ಕಾಂಗ್ರೆಸ್ ಸ್ಥಗಿತಗೊಳಿಸಿದ್ದ ಅಸ್ಸಾಂ ಒಪ್ಪಂದವನ್ನು ಜಾರಿಗೊಳಿಸಲು ಕೇಂದ್ರ ಸರ್ಕಾರ ಶಕ್ತಿ ಮೀರಿ ಪ್ರಯತ್ನಿಸುತ್ತಿದೆ ಎಂದ ಮೋದಿ, ಅಸ್ಸಾಂ ನ ಸಂಸ್ಕೃತಿ ಮತ್ತು ಹಿತಾಸಕ್ತಿಗಳನ್ನು ಕಾಪಾಡಲು ನಾವು ಶ್ರಮಿಸುತ್ತಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ.