ಬಲಿಯಾ(ಮೇ.14): ತಮ್ಮ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಅಥವಾ ವಿದೇಶಿ ಬ್ಯಾಂಕ್‌ಗಳಲ್ಲಿ ಹಣ ಇಟ್ಟಿರುವ ಆರೋಪವನ್ನು ಸಾಬೀತುಪಡಿಸುವಂತೆ ಪ್ರಧಾನಿ ನರೇಂದ್ರ ಮೋದಿ ವಿಪಕ್ಷಗಳಿಗೆ ಸವಾಲು ಹಾಕಿದ್ದಾರೆ.

ಮಹಾಮಿಲಾವಟಿ(ಮಹಾ ಕಲಬೆರಕೆ) ಗೆ ನಾನು ಬಹಿರಂಗ ಸವಾಲು ಹಾಕುತ್ತಿದ್ದು, ನನಗೆ ಸಂಬಂಧಿಸಿದ ಬೇನಾಮಿ ಆಸ್ತಿ, ಫಾರ್ಮ್ ಹೌಸ್, ಶಾಪಿಂಗ್ ಕಾಂಪ್ಲೆಕ್ಸ್ ಅಥವಾ ವಿದೇಶಿ ಬ್ಯಾಂಕ್‌ಗಳಲ್ಲಿ ಹಣ ಇಟ್ಟಿರುವ ಕುರಿತು ದಾಖಲೆ ಇದ್ದರೆ ಅದನ್ನು ಸಾಬೀತುಪಡಿಸಲಿ ಎಂದು ಸವಾಲು ಹಾಕಿದರು.

ಉತ್ತರ ಪ್ರದೇಶದಲ್ಲಿ ಮಾಯಾವತಿ, ಅಖಿಲೇಶ್ ಯಾದವ್ ಇಬ್ಬರ ಅವಧಿಯನ್ನೂ ಒಟ್ಟುಗೂಡಿಸಿದಕ್ಕಿಂತಲೂ ಹೆಚ್ಚಿನ ಅವಧಿಯನ್ನು ನಾನು ಗುಜರಾತ್ ಮುಖ್ಯಮಂತ್ರಿಯಾಗಿ ಕಳೆದಿದ್ದೇನೆ ಎಂದು ಮೋದಿ ವ್ಯಂಗ್ಯವಾಡಿದರು.  
 

ಲೋಕಸಭೆ ಚುನಾವಣೆಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ