ನವದೆಹಲಿ(ಮೇ.17): ಮಹಾತ್ಮಾ ಗಾಂಧಿ ಹಂತಕ ನಾಥೂರಾಮ್ ಗೋಡ್ಸೆ ಅವರನ್ನು ದೇಶಭಕ್ತ ಎಂದು ಕರೆದ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಅವರನ್ನು ತಾವು ಎಂದಿಗೂ ಕ್ಷಮಿಸುವುದಿಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಖಾಸಗಿ ಸುದ್ದಿವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ರಾಷ್ಟ್ರಪಿತ ಮಹಾತ್ಮಾ ಗಾಂಧಿ ಅವರಿಗೆ ಅಗೌರವ ತೋರುವ ಯಾರೇ ಆದರೂ ಅವರನ್ನು ಕ್ಷಮಿಸುವುದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

"

ಸಾಧ್ವಿ ಹೇಳಿಕೆಯಿಂದ ತಮಗೆ ತುಂಬ ನೋವಾಗಿದ್ದು, ಅವರನ್ನು ಕ್ಷಮಿಸುವ ಪ್ರಶ್ನೆಯೇ ಇಲ್ಲ ಎಂದು ಮೋದಿ ಹೇಳಿದ್ದು, ಮಹಾತ್ಮಾ ಗಾಂಧಿ ವಿರುದ್ಧ ಯಾರೇ ಹೇಳಿಕೆ ನೀಡಿದರೂ ಕ್ರಮ ಖಚಿತ ಎಂದು ಸ್ಪಷ್ಟಪಡಿಸಿದರು.

ಗೆದ್ದವರಾರು? ಬಿದ್ದವರಾರು ? ಮಹಾಸಂಗ್ರಾಮದ ಮಹಾಫಲಿತಾಂಶ. ಗುರುವಾರ 23 ಮೇ.