Asianet Suvarna News Asianet Suvarna News

ಏ.26ಕ್ಕೆ ಪ್ರಧಾನಿ ಮೋದಿ ನಾಮಪತ್ರ: 25ಕ್ಕೆ ಬರಲಿದ್ದಾರೆ ಜನರ ಹತ್ರ!

ಇದೇ ಏ.26ಕ್ಕೆ ನಾಮಪತ್ರ ಸಲ್ಲಿಸಲಿರುವ ಪ್ರಧಾನಿ ನರೇಂದ್ರ ಮೋದಿ| ಏ.26ಕ್ಕೆ ಭರ್ಜರಿ ರೋಡ್ ಶೋ ನಡೆಸಲಿದ್ದಾರೆ ಪ್ರಧಾನಿ| ಉತ್ತರ ಪ್ರದೇಶದ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಮೋದಿ ಸ್ಪರ್ಧೆ| ಮೋದಿ ರೋಡ್ ಶೋನಲ್ಲಿ ಭಾಗಿಯಾಗಲಿದ್ದಾರೆ ಬಿಜೆಪಿ ಗಣ್ಯ ನಾಯಕರು|

PM Modi To File Nomination from Varanasi on April 26
Author
Bengaluru, First Published Apr 22, 2019, 5:04 PM IST

ವಾರಾಣಸಿ(ಏ.22): ಉತ್ತರ ಪ್ರದೇಶದ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ನರೇಂದ್ರ ಮೋದಿ ಮತ್ತೆ ಕಣಕ್ಕಿಳಿಯುತ್ತಿದ್ದು, ಏಪ್ರಿಲ್ 26ರಂದು ನಾಮಪತ್ರ ಸಲ್ಲಿಸಲಿದ್ದಾರೆ.

ನಾಮಪತ್ರ ಸಲ್ಲಿಕೆಗೂ ಮುನ್ನಾ ದಿನ(ಏ.25) ವಾರಣಾಸಿಯಲ್ಲಿ ಭರ್ಜರಿ ರೋಡ್ ಶೋ ನಡೆಸಲಿದ್ದು, ಬಿಜೆಪಿಯ ಹಿರಿಯ ನಾಯಕರು ಭಾಗಿಯಾಗಲಿದ್ದಾರೆ ಎಂದು ಪಕ್ಷದ ಉನ್ನತ ಮೂಲಗಳು ತಿಳಿಸಿವೆ.

2014ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಾರಾಣಸಿ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದಿದ್ದರು. ವಾರಾಣಸಿಯ ಬನರಾಸ್ ಹಿಂದೂ ವಿಶ್ವವಿದ್ಯಾಲಯದ ಲಂಕಾ ಗೇಟ್ ಸಮೀಪದಿಂದ ಪ್ರಧಾನಿ ಮೋದಿ ರೋಡ್ ಶೋ ಆರಂಭವಾಗಲಿದೆ. 

ದೇಶದಲ್ಲಿ ಏ.11ರಿಂದ ಮೇ.19ರವೆರೆಗೆ ಏಳು ಹಂತಗಳಲ್ಲಿ ಮತದಾನ. ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ಏ.18ರಂದು ಮುಗಿದಿದ್ದು,ಏ.23ರಂದು ಎರಡನೇ ಹಂತದ ಮತದಾನ ನಡೆಯಲಿದೆ. ಭಾರತದಲ್ಲಿ 543 ಲೋಕಸಭಾ ಕ್ಷೇತ್ರ. ಕರ್ನಾಟಕದಲ್ಲಿ 28.

Follow Us:
Download App:
  • android
  • ios