ನವದೆಹಲಿ(ಮಾ.23): ಕೇಂದ್ರ ಜವಳಿ ಖಾತೆ ಸಚಿವೆ ಸ್ಮೃತಿ ಇರಾನಿ ಇಂದು 43ನೇ ವಸಂತಕ್ಕೆ ಕಾಲಿಟ್ಟಿದ್ದು, ಪ್ರಧಾನಿ ಮೋದಿ ಸೇರಿದಂತೆ ಅನೇಕ ಗಣ್ಯರು ಹುಟ್ಟುಹಬ್ಬದ ಶುಭಾಷಯ ಕೋರಿದ್ದಾರೆ.

ಸ್ಮೃತಿ ಇರಾನಿಗೆ ಟ್ವಿಟ್ಟರ್ ಮೂಲಕ ಶುಭ ಕೋರಿರುವ ಪ್ರಧಾನಿ ಮೋದಿ, ಪಕ್ಷ ಮತ್ತು ಕೇಂದ್ರ ಸರ್ಕಾರಕ್ಕೆ ತಮ್ಮದೇ ಕೊಡುಗೆ ನೀಡಿರುವ ಸ್ಮೃತಿ ಇರಾನಿ ಅವರ ಭವಿಷ್ಯ ಉತ್ತಮವಾಗಿರಲಿ ಎಂದು ಹಾರೈಸಿದ್ದಾರೆ.

ಪ್ರಧಾನಿ ಮೋದಿ ಟ್ವೀಟ್ ಗೆ ಪ್ರತಿಕ್ರಿಯೆ ನೀಡಿರುವ ಸ್ಮೃತಿ ಇರಾನಿ, ಪ್ರಧಾನಿಯವರ ಶುಭಾಷಯದಿಂದ ಸಂತೋಷವಾಗಿದ್ದು, ಅವರ ಆರ್ಶೀವಾದದಿಂದ ಈ ಬಾರಿ ಅಮೇಥಿ ಗೆಲ್ಲಲಿರುವುದಾಗಿ ಭರವಸೆ ವ್ಯಕ್ತಪಡಿಸಿದ್ದಾರೆ.