ಪ್ರಧಾನಿ ನರೇಂದ್ರ ಮೋದಿ ವಾರಣಾಸಿಯಿಂದ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದು, ಒಂದು ವೇಳೆ ಸೋತರೆ ಇತಿಹಾಸವೇ ಸೃಷ್ಟಿಯಾಗಲಿದೆ ಎನ್ನುವುದು ರಾಜಕೀಯ ನಾಯಕಿಯೋರ್ವರ ಮಾತಾಗಿದೆ. 

ಲಕ್ನೋ : ವಾರಣಾಸಿ ಕ್ಷೇತ್ರದಿಂದ ಸ್ಪರ್ಧೆ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಈ ಕ್ಷೇತ್ರದಿಂದ ಗೆಲ್ಲುವುದಕ್ಕಿಂತ ಸೋತರೆ ಇತಿಹಾಸ ಸೃಷ್ಟಿಯಾಗಲಿದೆ ಎಂದು ಬಿಎಸ್ ಪಿ ಮುಖಂಡೆ ಮಾಯಾವತಿ ಹೇಳಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಅಲ್ಲದೇ ಪ್ರಧಾನಿ ಮೋದಿ ಅವರ ಗುಜರಾತ್ ಮಾದರಿ ಅಭಿವೃದ್ಧಿ ಬಗ್ಗೆ ವಾಗ್ದಾಳಿ ನಡೆಸಿದ ಮಾಯಾವತಿ ಇಲ್ಲಿನ ಎಲ್ಲಾ ಅಭಿವೃದ್ಧಿ ಮಾದರಿಯಾಗಿಲ್ಲ. ಬಡತನ, ನಿರುದ್ಯೋಗ, ಹಿಂದುಳಿದ ವರ್ಗಗಳ ಅಭಿವೃದ್ಧಿ ಮಾಡುವಲ್ಲಿ ಮೋದಿ ಯಶಸ್ವಿಯಾಗಿಲ್ಲ. 

ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರವಿದ್ದು, ಮೋದಿ ಹಾಗೂ ಯೋಗಿ ಸಂಯೋಜನೆಯಲ್ಲಿ ಕೋಮು ಸಂಘರ್ಷ ಹುಟ್ಟುಹಾಕಲಾಗುತ್ತಿದೆ. ದೇಶದಲ್ಲಿ ಹಿಂಸಾತ್ಮಕತೆಯನ್ನು ಬಿತ್ತಲಾಗುತ್ತಿದೆ ಎಂದು ಮಾಯಾವತಿ ವಾಗ್ದಾಳಿ ನಡೆಸಿದರು. 

ಗೆದ್ದವರಾರು? ಬಿದ್ದವರಾರು ? ಮಹಾಸಂಗ್ರಾಮದ ಮಹಾಫಲಿತಾಂಶ. ಗುರುವಾರ 23 ಮೇ.