ಅಹಮದಾಬಾದ್(ಏ.23): ಇಂದು ದೇಶದಲ್ಲಿ ಲೋಕಸಭೆ ಚುನಾವಣೆಗೆ ಮೂರನೇ ಹಂತದ ಮತ್ತು ಕರ್ನಾಟಕದಲ್ಲಿ ಎರಡನೇ ಹಂತದ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವಾರು ಗಣ್ಯರು ಮತದಾನ ಮಾಡಿದ್ದಾರೆ.

ಅಹಮದಾಬಾದ್ ನಲ್ಲಿ ಮತದಾನ ಮಾಡಿರುವ ಪ್ರಧಾನಿ ಮೋದಿ, ಮತದಾನ ಮಾಡುವುದು ಕುಂಭಮೇಳದಲ್ಲಿ ಸ್ನಾನ ಮಾಡಿದಷ್ಟೇ ಪವಿತ್ರ ಎಂದು ಹೇಳಿದ್ದಾರೆ. ಚುನಾವಣೆ ಪ್ರಜಾಪ್ರಭುತ್ವದ ಹಬ್ಬವಾಗಿದ್ದು, ಎಲ್ಲರೂ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಮೋದಿ ಕರೆ ನೀಡಿದ್ದಾರೆ.

ಇದಕ್ಕೂ ಮೊದಲು ಗಾಂಧಿನಗರದಲ್ಲಿರುವ ತಮ್ಮ ನಿವಾಸಕ್ಕೆ ಭೇಟಿ ನೀಡಿದ ಮೋದಿ, ತಮ್ಮ ತಾಯಿ ಹೀರಾಬೆನ್ ಅವರ ಆಶೀರ್ವಾದ ಪಡೆದರು. 

ಅದರಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕೂಡ ಮತದಾನ ಮಾಡಿದ್ದು, ಮತದಾನ ಪ್ರಕ್ರಿಯೆಯಲ್ಲಿ ಎಲ್ಲರೂ ಭಾಗಿಯಾಗುವಂತೆ ಮನವಿ ಮಾಡಿದ್ದಾರೆ.

ದೇಶದಲ್ಲಿ ಏ.11ರಿಂದ ಮೇ.19ರವೆರೆಗೆ ಏಳು ಹಂತಗಳಲ್ಲಿ ಮತದಾನ. ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ಏ.18ರಂದು ಮುಗಿದಿದ್ದು,ಏ.23ರಂದು ಎರಡನೇ ಹಂತದ ಮತದಾನ ನಡೆಯಲಿದೆ. ಭಾರತದಲ್ಲಿ 543 ಲೋಕಸಭಾ ಕ್ಷೇತ್ರ. ಕರ್ನಾಟಕದಲ್ಲಿ 28.