ರಣರಣ ಮಂಡ್ಯದಲ್ಲಿ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಮತ್ತು ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಬೆಂಬಲಿಗರ ನಡುವೆ ಮಾರಾಮಾರಿ ನಡೆದಿರುವ ಘಟನೆ ಬೆಳಕಿಗೆ ಬಂದಿದೆ.
ಮಂಡ್ಯ, (ಏ18): ಹೈವೋಲ್ಟೇಜ್ ಕ್ಷೇತ್ರವಾದ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹಾಗೂ ಪಕ್ಷೇತರ ಅಭ್ಯರ್ಥಿ ಸುಮಲತಾ ಬೆಂಬಲಿಗರ ನಡುವೆ ಮಾರಾಮಾರಿ ನಡೆದಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
"
Live Updates: ತುಮಕೂರಿನಲ್ಲಿ ಕರ್ತವ್ಯ ಮರೆಯದ ಶತಾಯುಷಿಗಳು
ಮಂಡ್ಯದ ದೊಡ್ಡರಸಿನಕೆರೆಯಲ್ಲಿ ಇಂದು (ಗುರುವಾರ) ನಿಖಿಲ್ ಕುಮಾರಸ್ವಾಮಿ ವಾಹನ ಏರಿ ರೋಡ್ ಶೋ ಮಾಡಿದ್ದಾರೆ. ಇದಕ್ಕೆ ಪ್ರತಿಯಾಗಿ ಸುಮಲತಾ ಅಂಬರೀಶ್ ಸಹ ಪ್ರಚಾರಕ್ಕೆ ಮುಂದಾಗಿದ್ದಾರೆ. ಆದ್ರೆ ಸುಮಲತಾ ಪ್ರಚಾರಕ್ಕೆ ಪೊಲೀಸರು ನಿರಾಕರಿಸಿದ್ದಾರೆ.
ಇದ್ರಿಂದ ಕೆರಳಿದ ಸುಮಲತಾ ಬೆಂಬಲಿಗರು ಪೊಲೀಸರ ವರ್ತನೆಗೆ ಆಕ್ರೋಶಗೊಂಡು ಸುಮಲತಾ ಪರ ಘೋಷಣೆ ಕೂಗಿದ್ರು. ಈ ವೇಳೆ ನಿಖಿಲ್ ಹಾಗೂ ಸುಮಲತಾ ಬೆಂಬಲಿಗರ ನಡುವೆ ಮಾರಾಮಾರಿ ನಡೆದಿದೆ.
ತಕ್ಷಣವೇ ಪೋಲಿಸರು ಮಧ್ಯೆ ಪ್ರವೇಶಿಸಿ ಎರಡು ಕಡೆ ಬೆಂಬಲಿಗರನ್ನು ನಿಯಂತ್ರಿಸಿ, ಪರಿಸ್ಥಿತಿಯನ್ನು ಶಾಂತಗೊಳಿಸಿದರು.
