ಬೆಂಗಳೂರು[ಮಾ.21]: ಕರ್ನಾಟಕ ರಾಜ್ಯ ರಸ್ತೆ ನಿಗಮ (ಕೆಎಸ್‌ಆರ್‌ಟಿಸಿ) ಲೋಕಸಭಾ ಚುನಾವಣೆಯಲ್ಲಿ ಚಾಲಕ ಮತ್ತು ನಿರ್ವಾಹಕರು ಅಂಚೆ ಮತದಾನ ಮಾಡಲು ಅನುಕೂಲವಾಗುವಂತೆ ನಿಗಮದ ಎಲ್ಲ ವಿಭಾಗಗಳಲ್ಲಿ ನೋಡಲ್‌ ಅಧಿಕಾರಿಗಳನ್ನು ನೇಮಿಸಿದೆ.

ಚುನಾವಣೆ ಸಂದರ್ಭದಲ್ಲಿ ಚಾಲಕರು ಮತ್ತು ನಿರ್ವಾಹಕರು ತಾವು ಮತ ಚಲಾಯಿಸುವ ಸ್ಥಳಗಳ ಹೊರತಾಗಿ ಬೇರೆ ಸ್ಥಳಗಳಲ್ಲಿ ಚುನಾವಣಾ ಕರ್ತವ್ಯದಲ್ಲಿ ನಿರತರಾಗಿರುತ್ತಾರೆ. ಹಾಗಾಗಿ ಮತದಾನದ ಹಕ್ಕಿನಿಂದ ದೂರ ಉಳಿಯಬಾರದು ಎಂಬ ಉದ್ದೇಶದಿಂದ ಅಂಚೆ ಮತ ಚಲಾಯಿಸಲು ನಿಗಮದ ಎಲ್ಲ ವಿಭಾಗಗಳಲ್ಲಿ ನೋಡಲ್‌ ಅಧಿಕಾರಿಗಳನ್ನು ನೇಮಿಸಲಾಗಿದೆ.

ಅತಿ ಹೆಚ್ಚು ಅಂಚೆ ಮತ ಸಂಗ್ರಹಿಸುವ ಘಟಕ ಹಾಗೂ ವಿಭಾಗಕ್ಕೆ ಬಹುಮಾನ ನೀಡುವುದಾಗಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ.ಕಳಸದ ತಿಳಿಸಿದ್ದಾರೆ.

ಮತದಾನ ನಮ್ಮ ಹಕ್ಕು... ಪ್ರಜಾಪ್ರಭುತ್ವದ ಉತ್ಸವವನ್ನು ಯಶಸ್ವಿಗೊಳಿಸೋಣ...

ದೇಶದಲ್ಲಿ ಏ.11 ರಿಂದ ಮೇ 19ರವರೆಗೆ ಏಳು ಹಂತಗಳಲ್ಲಿ ಮತದಾನ ನಡೆಯಲಿದ್ದು, ಕರ್ನಾಟಕದಲ್ಲಿ ಏ.18 ಹಾಗೂ ಏ.23ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. 543 ಲೋಕಸಭಾ ಕ್ಷೇತ್ರಗಳಿಗೆ ನಡೆಯುವ ಚುನಾವಣೆಯಲ್ಲಿ ಮತ ಚಲಾಯಿಸಲು 90 ಕೋಟಿ ಮಂದಿ ಅರ್ಹರಾಗಿದ್ದಾರೆ