ನವದೆಹಲಿ(ಮೇ.16): ಮಹಾತ್ಮಾ ಗಾಂಧಿ ಹಂತಕ ನಾಥೂರಾಮ್ ಗೋಡ್ಸೆ ಓರ್ವ ದೇಶಭಕ್ತರಾಗಿದ್ದು, ಅವರು ದೇಶಭಕ್ತರಾಗಿಯೇ ಉಳಿಯಲಿದ್ದಾರೆ ಎಂದು ಭೋಪಾಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಹೇಳಿದ್ದಾರೆ.

ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ ಓರ್ವ ಹಿಂದೂ ಎಂಬ ನಟ, ರಾಜಕಾರಣಿ ಕಮಲ್ ಹಾಸನ್ ಹೇಳಿಕೆಗೆ ಪ್ರತಿಯಾಗಿ, ಸಾಧ್ವಿ ಗೋಡ್ಸೆ ಅವರನ್ನು ದೇಶಭಕ್ತ ಎಂದು ಕರೆದಿದ್ದಾರೆ.

ನಾಥೂರಾಮ್ ಕೃತ್ಯವನ್ನು ಯಾರು ಬೇಕಾದರೂ ತಮ್ಮ ಮೂಗಿನ ನೇರಕ್ಕೆ ಅರ್ಥೈಸಿಕೊಳ್ಳಬಹುದು. ಆದರೆ ಅವರೊಬ್ಬ ದೇಶಭಕ್ತರಾಗಿದ್ದು, ಭವಿಷ್ಯದಲ್ಲೂ ಅವರು ದೇಶಭಕ್ತರಾಗಿಯೇ ಉಳಿಯಲಿದ್ದಾರೆ ಎಂದು ಸಾಧ್ವಿ ಹೇಳಿದ್ದಾರೆ.

ಲೋಕಸಭೆ ಚುನಾವಣೆಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ