ವಾರಾಣಸಿ(ಏ.25): ಸ್ವಕ್ಷೇತ್ರ ವಾರಾಣಸಿಯಲ್ಲಿ ಇಂದು ಭರ್ಜರಿ ರೋಡ್ ಶೋ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ಇಲ್ಲಿನ ದಶಾಶ್ವಮೇಧ ಘಾಟ್’ನಲ್ಲಿ ಗಂಗಾರತಿ ಕಾರ್ಯಕ್ರಮದಲ್ಲಿ ಶ್ರದ್ಧೆಯಿಂದ ಪಾಲ್ಗೊಂಡರು.

ಬನಾರಾಸ್ ವಿವಿಯಲ್ಲಿ ಪಂಡಿತ್ ಮದನ್ ಮೋಹನ್ ಮಾಳವೀಯ ಪುತ್ಥಳಿಗೆ ಪುಷ್ಪ ನಮನ ಸಲ್ಲಿಸಿದ ಪ್ರಧಾನಿ ಮೋದಿ, ಲಂಕಾ ಗೇಟ್’ನಿಂದ ರೋಡ್ ಶೋ ಆರಂಭಿಸಿದರು.

ಸುಮಾರು 7 ಕಿ.ಮೀ ರೋಡ್ ಶೋ ನಡೆಸಿದ ಪ್ರಧಾನಿ ಮೋದಿ, ಕೊನೆಯಲ್ಲಿ ದಶಾಶ್ವಮೇಧ ಘಾಟ್’ಗೆ ಬಂದಿ ಗಂಗಾರತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಸುಮಾರು 7 ಅರ್ಚಕರಿಂದ ಸಾಂಪ್ರದಾಯಿಕ ಪೂಜಾ ವಿಧಿವಿಧಾನಗಳನ್ನು ನೆರವೇರಿಸಲಾಯಿತು. ಈ ವೇಳೆ ಶೀವನ ಆರಾಧನೆ ಮಾಡಲಾಗಿದ್ದು, ಪ್ರಧಾನಿ ಮೋದಿ ಕೂಡ ಶಿವಾರಾಧನೆಯಲ್ಲಿ ಪಾಲ್ಗೊಂಡರು.

ಬಳಿಕ ಗಂಗೆ ತಟದಲ್ಲಿ ಗಂಗಾರತಿಯಲ್ಲಿ ಪಾಲ್ಗೊಂಡ ಪ್ರಧಾನಿ, ಗಂಗೆಗೆ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಪ್ರಧಾನಿ ಮೋದಿಗೆ ಸಾಥ್ ನೀಡಿದರು.