ನವದೆಹಲಿ(ಮೇ.11): ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಎರಡೂವರೆ ವರ್ಷದ ಮಗುವನ್ನು ತಮ್ಮ ಖಾಸಗಿ ವಿಮಾನದ ಮೂಲಕ ದೆಹಲಿಗೆ ಏರ್​ಲಿಫ್ಟ್​ ಮಾಡುವ ಮೂಲಕ, ಪೂರ್ವ ಉತ್ತರಪ್ರದೇಶ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಮಾನವೀಯತೆ ಮೆರೆದಿದ್ದಾರೆ.

ಟ್ಯೂಮರ್​ನಿಂದ ಬಳಲುತ್ತಿದ್ದ ಬಾಲಕಿಯನ್ನು ಉತ್ತರ ಪ್ರದೇಶದ ಪ್ರಯಾಗ್​ರಾಜ್​ನ ಕಮಲಾ ನೆಹರು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಬಾಲಕಿಯ ಸ್ಥಿತಿ ಗಂಭೀರವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗೆ ದೆಹಲಿಗೆ ಕರೆದೊಯ್ಯುವಂತೆ ವೈದ್ಯರು ಸೂಚಿಸಿದ್ದರು.

ಈ ವಿಷಯವನ್ನು ಕಾಂಗ್ರೆಸ್ ನಾಯಕರೊಬ್ಬರು ಪ್ರಿಯಾಂಕಾ ಗಾಧಿ ಅವರ ಗಮನಕ್ಕೆ ತಂದಿದ್ದು, ಕೂಡಲೇ ವಿಮಾನದ ಮೂಲಕ ಬಾಲಕಿಯನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ಕರೆದೊಯ್ಯುವ ವ್ಯವಸ್ಥೆ ಮಾಡಲಾಗಿದೆ.
ಈ ವಿಮಾನದಲ್ಲಿ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಕ್ರಿಕೆಟಿಗ ಅಜರುದ್ದೀನ್, ಬಾಲಕಿ ಅಂಶು ಹಾಗೂ ಆಕೆಯ ಪೋಷಕರು ದೆಹಲಿಗೆ ತೆರಳಿದರು.

ಲೋಕಸಭೆ ಚುನಾವಣೆಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ