ಮಾಯಾ, ಮೋದಿಗೆ ಸಡ್ಡು ಹೊಡೆದ ಪ್ರಿಯಾಂಕಾ| ಆರ್ಮಿ ಮುಖ್ಯಸ್ಥ ಚಂದ್ರಶೇಖರ ಆಜಾದ್ ಭೇಟಿ

ಮೀರತ್‌[ಮಾ.14]: ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ಬುಧವಾರ ಭೀಮ್‌ ಆರ್ಮಿ ಮುಖ್ಯಸ್ಥ ಚಂದ್ರಶೇಖರ ಆಜಾದ್‌ ಅವರನ್ನು ಆಸ್ಪತ್ರೆಯಲ್ಲಿ ಭೇಟಿ ಮಾಡುವ ಮೂಲಕ ಸಂಚಲನ ಮೂಡಿಸಿದ್ದಾರೆ.

ದಲಿತ ನಾಯಕರಾಗಿ ಗುರುತಿಸಿಕೊಂಡಿರುವ ಚಂದ್ರಶೇಖರ ಆಜಾದ್‌ರನ್ನು, ನೀತಿ ಸಂಹಿತೆ ಉಲ್ಲಂಘನೆ ಅಡಿಯಲ್ಲಿ ಮಂಗಳವಾರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಆಜಾದ್‌ ರಾಜಕೀಯ ರಾರ‍ಯಲಿ ನಡೆಸಿದ್ದು, ಕಾರು ಮತ್ತು ದ್ವಿಚಕ್ರ ವಾಹನಗಳನ್ನೂ ಸಹ ಬಳಕೆ ಮಾಡಿಕೊಂಡು ನೀತಿ ಸಂಹಿತೆ ಉಲ್ಲಂಘಿಸಿದ್ದರು. ಈ ಹಿನ್ನೆಲೆಯಲ್ಲಿ ವಶಕ್ಕೆ ಪಡೆದಾಗ ಅನಾರೋಗ್ಯಕ್ಕೀಡಾದ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.