ಲಕ್ನೋ[ಏ. 28] ಅಮೇಥಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸ್ಮೃತಿ ಇರಾನಿ ಅವರು ಮತರಾರಿಗೆ ಹಣ, ಸೀರೆ ಹಾಗೂ ಶೂ ಹಂಚುತ್ತಿದ್ದಾರೆ ಎಂದು ಪ್ರಿಯಾಂಕ ವಾದ್ರಾ ಆರೋಪಿಸಿದ್ದಾರೆ.

ಸ್ಮೃತಿ ಇರಾನಿಯವರು ತಮ್ಮ ಕ್ಷೇತ್ರದಲ್ಲಿ ಮಾಧ್ಯಮಗಳ ಮುಂದೆಯೇ ಮತದಾರರಿಗೆ ಆಮಿಷ ಒಡ್ಡುವ ಕೆಲಸ ಮಾಡುತ್ತಿದ್ದಾರೆ. ಇಲ್ಲಿನ ಜನರು ಸ್ವಾಭಿಮಾನದಿಂದ ಬದುಕುತ್ತ ಬಂದವರು. ಅವರಿಗೆ ಅಪಮಾನವಾಗುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಲೋಕಸಭಾ ಚುನಾವಣೆಗೆ ಪ್ರಿಯಾಂಕ ಸ್ಪರ್ಧೆ : ಯಾವ ಕ್ಷೇತ್ರದಿಂದ..?

ರಾಜ್ಯ ಮತ್ತು ಕೇಂದ್ರ ಎರಡೂ ಕಡೆ ಅಧಿಕಾರದಲ್ಲಿ ಇದ್ದರೂ ಇಲ್ಲಿನ ಜನರಿಗೆ ಯಾವುದೇ ಮೂಲ ಸೌಕರ್ಯ ಸಿಗುತ್ತಿಲ್ಲ. ಚುನಾವಣೆ ಸಂದರ್ಭ ಬಿಜೆಪಿಗೆ ಜನರ ನೆನಪಾಗಿದ್ದು ವಾಮ ಮಾರ್ಗದಿಂದ ಗೆಲ್ಲಲು ಜನರಿಗೆ ಆಮಿಷ ಒಡ್ಡುತ್ತಿದ್ದಾರೆ ಎಂದು ಆರೋಪಿಸಿದರು.