ನವದೆಹಲಿ(ಮೇ.30): ಪ್ರಧಾನಿ ಮೋದಿ ಪ್ರಮಾಣವಚನ ಸಮಾರಂಭಕ್ಕೆ ಕ್ಷಣಗಣನೆ ಶುರುವಾಗಿದ್ದು, ಸುಮಾರು 8 ಸಾವಿರ ವಿಶೇಷ ಅತಿಥಿಗಳು ಪ್ರಮಾಣವಚನ ಸಮಾರಂಭಕ್ಕೆ ಸಾಕ್ಷಿಯಾಗಲಿದ್ದಾರೆ.

ಈಗಾಗಲೇ ಮೋದಿ ಪ್ರಮಾಣವಚನ ಸಮಾರಂಭಕ್ಕೆ ಪ.ಬಂಗಾಳದಲ್ಲಿ ವಿವಿಧೆಡೆ ನಡೆದ ಹಿಂಸಾಚಾರದಲ್ಲಿ ಮೃತಪಟ್ಟ ಬಿಜೆಪಿ ಕಾರ್ಯಕರ್ತರ ಕುಟುಂಬ ವರ್ಗವನ್ನು ಆಹ್ವಾನಿಸಲಾಗಿದೆ.

ಈ ಮಧ್ಯೆ ಮೋದಿ ಪ್ರಮಾಣವಚನ ಸಮಾರಂಭಕ್ಕೆ ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ CRPF ಯೋಧರ ಕುಟುಂಬವನ್ನೂ ಆಹ್ವಾನಿಸಲಾಗಿದೆ. ಪುಲ್ವಾಮಾ ದಾಳಿಯ ಆಯ್ದ ಹುತಾತ್ಮರ ಕುಟುಂಬ ವರ್ಗವನ್ನು ಮೋದಿ ಪ್ರಮಾಣವಚನ ಸಮಾರಂಭಕ್ಕೆ ಆಹ್ವಾನಿಸಲಾಗಿದೆ.