ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಚೌಕಿದಾರ ಜೈಲಿಗೆ!| ರಫೇಲ್‌ ಖರೀದಿ ಹಗರಣ ಬಗ್ಗೆ ಮತ್ತೆ ಪ್ರಸ್ತಾಪಿಸಿದ ರಾಹುಲ್‌| ಪ್ರಧಾನಿ ನರೇಂದ್ರ ಮೋದಿ ವಿರುದ್ಧ ರಾಹುಲ್‌ ತೀವ್ರ ವಾಗ್ದಾಳಿ

ನಾಗ್ಪುರ[ಏ.05]: 2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಧಿಕಾರದ ಗದ್ದುಗೆಗೇರಿದರೆ ದೇಶದ ಚೌಕಿದಾರ ಜೈಲು ಪಾಲಾಗಲಿದ್ದಾರೆ ಎಂದು ರಾಹುಲ್‌ ಗಾಂಧಿ ಎಚ್ಚರಿಕೆ ನೀಡಿದ್ದಾರೆ. ಈ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪರೋಕ್ಷ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.

ಗುರುವಾರ ಇಲ್ಲಿ ನಡೆದ ಕಾಂಗ್ರೆಸ್‌ ರಾರ‍ಯಲಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್‌, ‘ಪ್ರಧಾನಿ ನರೇಂದ್ರ ಮೋದಿ ಅವರು ರಫೇಲ್‌ ಖರೀದಿಯ ಮೂಲ ಒಪ್ಪಂದವನ್ನು ಬದಲಾಯಿಸಿ ಹೆಚ್ಚಿನ ಬೆಲೆ ನಿಗದಿಗೊಳಿಸಿದ್ದರು ಎಂಬುದು ರಕ್ಷಣಾ ಸಚಿವಾಲಯದ ದಾಖಲೆಗಳಿಂದ ದೃಢವಾಗಿದೆ. ಚೌಕಿದಾರ್‌ ತಪ್ಪು ಮಾಡಿದ್ದಾರೆ' ಎಂದಿದ್ದಾರೆ.

ಅಲ್ಲದೇ 'ಈ ಹಿಂದಿನ ರಕ್ಷಣಾ ಸಚಿವರಾಗಿದ್ದ ಮನೋಹರ ಪರ್ರಿಕರ್‌ ಅವರಿಗೆ ಪ್ರಶ್ನಿಸಿದಾಗ, ಈ ಬಗ್ಗೆ ನನಗೇನೂ ಗೊತ್ತಿಲ್ಲ. ಮೋದಿ ಅವರನ್ನೇ ನೇರವಾಗಿ ಕೇಳಿ ಎಂದು ಹೇಳಿದ್ದರು. ಹೀಗಾಗಿ ಭ್ರಷ್ಟಾಚಾರ ನಡೆದಿದೆ ಎಂಬುದು ಪರ್ರಿಕರ್‌ ಅವರಿಗೆ ಗೊತ್ತಿತ್ತು,’ ಎಂದು ಪ್ರಧಾನಿ ಮೋದಿ ವಿರುದ್ಧ ರಾಹುಲ್‌ ಗುಡುಗಿದರು.

ಮತದಾನ ನಮ್ಮ ಹಕ್ಕು... ಪ್ರಜಾಪ್ರಭುತ್ವದ ಉತ್ಸವವನ್ನು ಯಶಸ್ವಿಗೊಳಿಸೋಣ...

ದೇಶದಲ್ಲಿ ಏ.11 ರಿಂದ ಮೇ 19ರವರೆಗೆ ಏಳು ಹಂತಗಳಲ್ಲಿ ಮತದಾನ ನಡೆಯಲಿದ್ದು, ಕರ್ನಾಟಕದಲ್ಲಿ ಏ.18 ಹಾಗೂ ಏ.23ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. 543 ಲೋಕಸಭಾ ಕ್ಷೇತ್ರಗಳಿಗೆ ನಡೆ