ಅಮೇಥಿ:(ಏ.10): ಕಾಂಗ್ರೆಸ್ ಅಭ್ಯರ್ಥಿ ರಾಹುಲ್ ಗಾಂಧಿ ಅಮೇಥಿ ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದು, ಸಾವಿರಾರು ಕಾರ್ಯಕರ್ತರು ಮತ್ತು ಕುಟುಂಬಸ್ಥರ ಬೆಂಬಲದೊಂದಿಗೆ ಚುನಾವಣಾ ಆಯೋಗಕ್ಕೆ ಬಂದು ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಕೆಗೂ ಮುನ್ನ ತೆರೆದ ವಾಹನದಲ್ಲಿ ರೋಡ್ ಶೋ ನಡೆಸಿದ ರಾಹುಲ್ ಗಾಂಧಿ, ಅಮೇಥಿ ಲೋಕಸಭಾ ಕ್ಷೇತ್ರದಿಂದ ಗೆಲುವಿನ ವಿಶ್ವಸ ವ್ಯಕ್ತಪಡಿಸಿದರು.

ನಂತರ ಆಯೋಗದ ಕಚೇರಿಗೆ ತೆರಳಿದ ರಾಹುಲ್ ಗಾಂಧಿ ಅಧಿಕಾರಿಗಳ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದರು. ಈ ವೇಳೆ ರಾಹುಲ್ ತಾಯಿ ಸೋನಿಯಾ ಗಾಂಧಿ, ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಿ ಹಾಗೂ ಭಾವ ರಾಬರ್ಟ್ ವಾದ್ರಾ ಉಪಸ್ಥಿತರಿದ್ದರು.

ಅಮೇಥಿಯಲ್ಲಿ ರಾಹುಲ್ ಗೆ ವಿರುದ್ಧವಾಗಿ ಬಿಜೆಪಿಯಿಂದ ಕೇಂದ್ರ ಸಚಿವೆ ಸ್ಮೃತಿ ಇರಾನಿ ಸ್ಪರ್ಧಿಸುತ್ತಿದ್ದು, ಈ ಬಾರಿ ತೀವ್ರ ಪೈಪೋಟಿ ನಡೆಯಲಿದೆ ಎಂದು ಅಂದಾಜಿಸಲಾಗಿದೆ. 

ಅಮೇಥಿಯಲ್ಲಿ ರಂದು ಚುನಾವಣೆ ನಡೆಯಲಿದ್ದು, ಮೇ.23ರಂದು ಫಲಿತಾಂಶ ಹೊರ ಬೀಳಲಿದೆ.