ಊನಾ(ಮೇ.11): ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಕಟ್ಟು ನಿಂತ ಹೆಲಿಕಾಪ್ಟರ್ ರಿಪೇರಿ ಮಾಡಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಫೋಟೋ ವೈರಲ್ ಆಗಿದೆ.

ಹಿಮಾಚಲ ಪ್ರದೇಶದ ಊನದಲ್ಲಿ ರಾಹುಲ್ ಗಾಂಧಿ ಪ್ರಯಾಣಿಸುತ್ತಿದ್ದ ಹೆಲಿಕಾಫ್ಟರ್ ತಾಂತ್ರಿಕ ದೋಷದಿಂದ ಕೆಟ್ಟು ನಿಂತಿತ್ತು. ಈ ವೇಳೆ ಸ್ವತಃ ಕೆಳಗಿಳಿದ ರಾಹುಲ್, ಹೆಲಿಕಾಫ್ಟರ್ ರಿಪೇರಿ ಮಾಡುವಲ್ಲಿ ಸಿಬ್ಬಂದಿಗೆ ನೆರವಾಗಿದ್ದಾರೆ.

ಖುದ್ದು ರಾಹುಲ್ ಗಾಂಧಿ ತಮ್ಮ ಇನ್​ಸ್ಟಾಗ್ರಾಮ್​ನಲ್ಲಿ ಈ ಫೋಟೋ ಶೇರ್ ಮಾಡಿದ್ದು, ‘ಉತ್ತಮ ಒಗ್ಗಟ್ಟಿನ ಕೆಲಸದ ಮೂಲಕ ಸಮಸ್ಯೆ ಸರಿಪಡಿಸಲಾಗಿದೆ’ ಎಂದು ಶೀರ್ಷಿಕೆ ನೀಡಿದ್ದಾರೆ.

ಲೋಕಸಭೆ ಚುನಾವಣೆಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ