ರಾಹುಲ್ ಗಾಂಧಿಗೆ ಎದುರಾಯ್ತು ಹೊಸ ಸಂಕಷ್ಟ| ಅಮೇಥಿಯಲ್ಲಿ ರಾಹುಲ್ ನಾಮಪತ್ರ ತಿರಸ್ಕೃತಗೊಳ್ಳುವ ಸಾಧ್ಯತೆ?| ಪೌರತ್ವ ವಿಚಾರದಲ್ಲಿ ರಾಹುಲ್ ಗಾಂಧಿಗೆ ಸಂಕಷ್ಟ| ನಾಮಪತ್ರ ಪರಿಶೀಲನೆ ಏಪ್ರಿಲ್ 22ಕ್ಕೆ ಮುಂದೂಡಿಕೆ 

ಅಮೇಥಿ(ಏ.20): ಅಮೇಥಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಹುಲ್ ಗಾಂಧಿ ಅವರಿಗೆ ಹೊಸ ಸಂಕಷ್ಟವೊಂದು ಎದುರಾಗಿದೆ. ಬ್ರಿಟಿಷ್ ಪೌರತ್ವ ವಿಚಾರದಲ್ಲಿ ರಾಹುಲ್ ಗಾಂಧಿ ನಾಮಪತ್ರ ತಿರಸ್ಕೃತಗೊಳ್ಳುವ ಆತಂಕ ಎದುರಾಗಿದೆ.

ರಾಹುಲ್ ಗಾಂಧಿ ತಮ್ಮನ್ನು ಬ್ರಿಟಿಷ್ ಪ್ರಜೆ ಎಂದು ಉಲ್ಲೇಖಿಸಿದ್ದು, ಯುಕೆಯ ಕಂಪನಿಯೊಂದನ್ನು ನೋಂದಾಯಿಸಿರುವ ಪ್ರಮಾಣಪತ್ರದಲ್ಲಿಯೂ ತಾವು ಬ್ರಿಟಿಷ್ ಪೌರತ್ವ ಪಡೆದಿರುವುದಾಗಿ ಹೇಳಿದ್ದಾರೆ.

ಭಾರತೀಯರಲ್ಲದವರಿಗೆ ಚುನಾವಣೆಯಲ್ಲಿ ಸ್ಪರ್ಧಿಸುವ ಅವಕಾಶ ಇಲ್ಲ ಎಂದಾದ ಮೇಲೆ, ರಾಹುಲ್ ಗಾಂಧಿ ನಾಮಪತ್ರ ಸ್ವೀಕಾರ್ಹವಲ್ಲ ಎಂದು ಪಕ್ಷೇತರ ಅಭ್ಯರ್ಥಿ ಧ್ರುವ ಲಾಲ್ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ.

Scroll to load tweet…

ಪಕ್ಷೇತರ ಅಭ್ಯರ್ಥಿ ಧ್ರುವ ಲಾಲ್ ನೀಡಿರುವ ದೂರಿನ ಆಧಾರದ ಮೇಲೆ ಅಮೇಥಿಯ ನಾಮಪತ್ರ ಪರಿಶೀಲನೆ ಪ್ರಕ್ರಿಯೆನ್ನು ಏ.22ಕ್ಕೆ ಮುಂದೂಡಲಾಗಿದೆ.

"

ನಾಮಪತ್ರ ಪರಿಶೀಲನೆ ಮುಂದೂಡಿ ಅಮೇಥಿ ಚುನಾವಣಾಧಿಕಾರಿ ರಾಮ್ ಮನೋಹರ್ ಮಿಶ್ರಾ ಆದೇಶ ಹೊರಡಿಸಿದ್ದಾರೆ.

ದೇಶದಲ್ಲಿ ಏ.11ರಿಂದ ಮೇ.19ರವೆರೆಗೆ ಏಳು ಹಂತಗಳಲ್ಲಿ ಮತದಾನ. ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ಏ.18ರಂದು ಮುಗಿದಿದ್ದು,ಏ.23ರಂದು ಎರಡನೇ ಹಂತದ ಮತದಾನ ನಡೆಯಲಿದೆ. ಭಾರತದಲ್ಲಿ 543 ಲೋಕಸಭಾ ಕ್ಷೇತ್ರ. ಕರ್ನಾಟಕದಲ್ಲಿ 28.