ನವದೆಹಲಿ(ಮೇ.10): ಪ್ರಧಾನಿ ಮೋದಿ ಒತ್ತಡದಲ್ಲಿ ಮಾನಸಿಕ ಸ್ಥಿಮಿತತೆ ಕಳೆದುಕೊಂಡಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹರಿಹಾಯ್ದಿದ್ದಾರೆ.

ಈ ಕುರಿತು ಟ್ವಿಟ್ ಮಾಡಿರುವ ರಾಹುಲ್ ಗಾಂಧಿ, ಲೋಕಸಭೆ ಚುನಾವಣೆಯನ್ನು ಸೋಲುವ ಭೀತಿಯಲ್ಲಿರುವ ಪ್ರಧಾನಿ ಮೋದಿ ಒತ್ತಡದಲ್ಲಿ ತಮ್ಮ ಮಾನಸಿಕ ಸ್ಥಿಮಿತತೆ ಕಳೆದುಕೊಂಡಿದ್ದಾರೆ ಎಂದು ಕಿಚಾಯಿಸಿದ್ದಾರೆ.

ವಿವಿಧ ಮಾಧ್ಯಮಗಳಿಗೆ ಮೋದಿ ನೀಡಿರುವ ಸಂದರ್ಶನದಲ್ಲಿ ಅವರು ಒತ್ತಡದಲ್ಲಿರುವುದು ಸ್ಪಷ್ಟವಾಗಿ ಗೋಚರವಾಗುತ್ತದೆ ಎಂದು ರಾಹುಲ್ ಹೇಳಿದ್ದಾರೆ.

ಇದೇ ವೇಳೆ ಪ್ರಧಾನಿ ಮೋದಿ ಅವರಂತಹ ದ್ವೇಷಕಾರಿ ಹಾಗೂ ದುರ್ಬಲ ಪ್ರಧಾನಿಯನ್ನು ತಮ್ಮ ಜೀವನದಲ್ಲಿ ನೋಡಿಲ್ಲ ಎಂದು ರಾಹುಲ್ ಸಹೋದರಿ, ಪ್ರಿಯಾಂಕಾ ಗಾಂಧಿ ಕೂಡ ಪ್ರಧಾನಿ ಮೇಲೆ ವಾಗ್ದಾಳಿ ಮಾಡಿದ್ದಾರೆ.

ಲೋಕಸಭೆ ಚುನಾವಣೆಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ