ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ಗಂಭೀರ ಅರೋಪ| ದಕ್ಷಿಣದವರನ್ನು ಭಾರತೀಯರೆಂದು ಮೋದಿ ಸರ್ಕಾರ ಪರಿಗಣಿಸುತ್ತಿಲ್ಲ ಎಂದ ರಾಹುಲ್| 'ದಕ್ಷಿಣ ಭಾರತದವರು ಈಗಿನ ಮೋದಿ ಸರ್ಕಾರದ ಬಗ್ಗೆ ಅಸಮಾಧಾನಗೊಂಡಿದ್ದಾರೆ'| ಕೇರಳದ ವೈನಾಡು ಕ್ಷೇತ್ರದಿಂದ ಸ್ಪರ್ಧಿಸಲು ಕಾರಣ ತಿಳಿಸಿದ ಕಾಂಗ್ರೆಸ್ ಅಧ್ಯಕ್ಷ|

ನವದೆಹಲಿ(ಏ.02): ಕಳೆದ ಐದು ವರ್ಷಗಳಲ್ಲಿ ಉತ್ತರ ಮತ್ತು ದಕ್ಷಿಣ ಭಾರತದ ಮಧ್ಯೆ ಕಂದಕ ಹೆಚ್ಚಾಗಿದ್ದು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದಕ್ಷಿಣದವರನ್ನು ಭಾರತೀಯರು ಎಂದೇ ಪರಿಗಣಿಸುತ್ತಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ದಕ್ಷಿಣ ಭಾರತದವರು ಈಗಿನ ಮೋದಿ ಸರ್ಕಾರದ ಬಗ್ಗೆ ಅಸಮಾಧಾನಗೊಂಡಿದ್ದಾರೆ. ಈ ಕುರಿತು ಅನೇಕ ದಕ್ಷಿಣ ಭಾರತೀಯರು ನನ್ನ ಬಳಿ ಅಸಮಾಧಾನ ತೋಡಿಕೊಂಡಿದ್ದು, ಕೇಂದ್ರ ಸರ್ಕಾರ ನಮ್ಮ ಸಂಸ್ಕೃತಿ, ನಮ್ಮ ಪರಂಪರೆಯನ್ನು ಗೌರವಿಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ರಾಹುಲ್ ಹೇಳಿದ್ದಾರೆ.

Scroll to load tweet…

ನವದೆಹಲಿಯಲ್ಲಿ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿ ಮಾತನಾಡಿದ ರಾಹುಲ್, ದಕ್ಷಿಣ ಭಾರತೀಯರಲ್ಲಿ ಆಪ್ತ ಭಾವನೆ ಮೂಡಿಸಲೆಂದೇ ತಾವು ಕೇರಳದ ವೈನಾಡು ಕ್ಷೇತ್ರದಿಂದ ಸ್ಪರ್ಧಿಸುತ್ತಿರುವುದಾಗಿ ಹೇಳಿದರು.

ಉತ್ತರ ಭಾರತದಲ್ಲಿ ಮಾತ್ರ ಬಿಜೆಪಿಗೆ ಕಾಣಿಸುತ್ತದೆ. ದಕ್ಷಿಣ ಭಾರತದವರು ಭಾರತೀಯರೇ ಅಲ್ಲ ಎಂಬಂತೆ ಈಗಿನ ಕೇಂದ್ರ ಸರ್ಕಾರ ನಡೆದುಕೊಳ್ಳುತ್ತಿದೆ ಎಂದು ರಾಹುಲ್ ಗಂಭೀರ ಆರೋಪ ಮಾಡಿದರು.