ರಾಹುಲ್ ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ತಾಂತ್ರಿಕ ದೋಷ| ನವದೆಹಲಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದ ವಿಮಾನ| ಚುನಾವಾ ಪ್ರಚಾರ ಸಭೆಗೆ ಹೊರಟಿದ್ದ ಕಾಂಗ್ರೆಸ್ ಅಧ್ಯಕ್ಷ| ಟ್ವಿಟ್ಟರ್ ಖಾತೆಯಲ್ಲಿ ವಿಡಿಯೋ ಶೇರ್ ಮಾಡಿದ ರಾಹುಲ್ ಗಾಂಧಿ|
ನವದೆಹಲಿ(ಏ.26):ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದಿದ್ದು, ವಿಮಾನ ನವದೆಹಲಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.
ಈ ಕುರಿತು ಸ್ವತಃ ರಾಹುಲ್ ಗಾಂಧಿ ತಮ್ಮ ಟ್ವೀಟರ್ ಖಾತೆಯಲ್ಲಿ ವಿಡಿಯೋವೊಂದನ್ನು ಶೇರ್ ಮಾಡಿದ್ದು, 'ನಾನು ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ಎಂಜಿನ್ ದೋಷ ಕಂಡು ಬಂದಿದ್ದು. ಅನಿವಾರ್ಯವಾಗಿ ವಿಮಾನ ದೆಹಲಿಗೆ ವಾಪಸ್ ಆಗಿದೆ...'ಎಂದು ತಿಳಿಸಿದ್ದಾರೆ.
Scroll to load tweet…
ರಾಹುಲ್ ನವದೆಹಲಿಯಿಂದ ಬಿಹಾರದ ಸಮಸ್ತಿಪುರ, ಒರಿಸ್ಸಾದ ಬಾಲಾಸೋರ್ ಮತ್ತು ಮಹಾರಾಷ್ಟ್ರದ ಸಂಗಮ್ ನಗರ್‌ನಲ್ಲಿ ನಡೆಯಬೇಕಿದ್ದ ಪ್ರಚಾರ ಕಾರ್ಯಕ್ಕೆ ಹೊರಟಿದ್ದರು. ತಾಂತ್ರಿಕ ದೋಷದ ಪರಿಣಾಮ ಈ ಕಾರ್ಯಕ್ರಮಗಳ ವೇಳಾಪಟ್ಟಿ ಬದಲಾಗಿದೆ.
ಈ ಹಿಂದೆಯೂ ಹಲವು ಬಾರಿ ರಾಹುಲ್ ಗಾಂಧಿ ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದ ಉದಾಹರಣೆಗಳಿವೆ.
