ಬೆಂಗಳೂರು. [ಏ.05]: ರಾಜ್ಯ ಮೈತ್ರಿ ನಾಯಕರು ಪಕ್ಷದ ಕಾರ್ಯಕರ್ತರನ್ನು ಮೈತ್ರಿ ಧರ್ಮ ಪರ ಮನವೊಲಿಕೆ ಕಾರ್ಯ ನಡೆಸುತ್ತಿದ್ದರೆ, ಇತ್ತ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರೇ ಮಂಡ್ಯ ಮೈತ್ರಿ ಅಭ್ಯರ್ಥಿ ನಿಖಿಲ್ ಪರ ರೋಡ್ ಶೋ ನಡೆಸಲಿದ್ದಾರೆ.

ಏಪ್ರಿಲ್ 13 ರಂದು ಮಂಡ್ಯದಲ್ಲಿ ರಾಹುಲ್ ಗಾಂಧಿ ರೋಡ್ ಶೋ ನಡೆಯಲಿದ್ದು, ಆ ಮೂಲಕ ನಿಖಿಲ್ ಕುಮಾರಸ್ವಾಮಿ ಪರವಾಗಿ ಮತ ಯಾಚಿಸಲಿದ್ದಾರೆ. 

ಪ್ರಮುಖವಾಗಿ ಹುಣಸೂರು ಹಾಗೂ ಕೆ.ಆರ್.ನಗರದಲ್ಲಿ ರೋಡ್ ಶೋ ನಡೆಯಲಿದ್ದು, ಅಂದೇ ಮೈಸೂರಿನಲ್ಲಿ ಬೃಹತ್ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ

ಉಳಿದಂತೆ ರಾಹುಲ್ ಗಾಂಧಿ ಅವರು ಚಾಮರಾಜನಗರ, ಮೈಸೂರು, ಮಡಕೇರಿ ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರಗಳಲ್ಲಿ ಒಂದೇ ದಿನ ಪ್ರಚಾರ ಮಾಡಲಿದ್ದಾರೆ.