ಬೆಂಗಳೂರು : ಮುಂಗಾರು ಆರಂಭಕ್ಕೂ ಮುನ್ನ ಬೇಸಿಗೆಯಲ್ಲೇ ರಾಜ್ಯದ ಹಲವೆಡೆ ಈಗಾಗಲೇ ಮಳೆಯಾಗುತ್ತಿದ್ದು, ಇನ್ನೆರಡು ದಿನ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಏಪ್ರಿಲ್ 18 ರಂದು ರಾಜ್ಯದಲ್ಲಿ ಗುಡುಗು ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ.  ಮಧ್ಯಾಹ್ನದ ನಂತರ ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡಿನ ಭಾಗದಲ್ಲಿ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ತಿಳಿಸಿದೆ. 

ಇದು ಪೂರ್ವ ಮುಂಗಾರು ಮಳೆಯಾಗಿರುವುದರಿಂದ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಮತದಾನದ ದಿನವಾದ್ದರಿಂದ ಮುಂಜಾನೆಯೇ ತೆರಳಿ ನಿಮ್ಮ ಹಕ್ಕನ್ನು ಚಲಾಯಿಸಿ ಬರುವುದು ಒಳಿತು.

ಮಳೆಯೆಂದು ಮನೆಯಲ್ಲಿ ಕೂರದೇ ತಪ್ಪದೇ ಮತ ಹಾಕಿ, ಸೂಕ್ತ ಅಭ್ಯರ್ಥಿಯ ಆಯ್ಕೆಯಲ್ಲಿ ಪಾಲ್ಗೊಳ್ಳಿ

ದೇಶದಲ್ಲಿ ಏ.11ರಿಂದ ಮೇ.19ರವರೆಗೆ ಏಳು ಹಂತಗಳಲ್ಲಿ ಮತದಾನ. ಕರ್ನಾಟಕದಲ್ಲಿ ಏ.18 ಹಾಗೂ ಏ.23ರಂದು ಎರಡು ಹಂತಗಳಲ್ಲಿ ಮತದಾನ. ಭಾರತದಲ್ಲಿ 543 ಲೋಕಸಭಾ ಕ್ಷೇತ್ರ. ಕರ್ನಾಟಕದಲ್ಲಿ 28.