ಹುಬ್ಬಳ್ಳಿ: ಕುಂದಗೋಳ ಉಪಚುನಾವಣೆ ಪ್ರಚಾರದಲ್ಲಿ ತೊಡಗಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಶನಿವಾರ ಬೆಳಗ್ಗೆ ಬಾಳೆಹೊನ್ನೂರು ರಂಭಾಪುರಿ ಜಗದ್ಗುರು ವೀರಸೋಮೇಶ್ವರ ಶ್ರೀಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ. 

ಈ ಸಂದರ್ಭದಲ್ಲಿ ಶ್ರೀಗಳು ಲೋಕಸಭೆ ಚುನಾವಣೆ ಫಲಿತಾಂಶ ಹೊರಬರುವವರೆಗೂ ಎಲ್ಲರೂ ಶಾಂತವಾಗಿರ ಬೇಕು. ಮೋದಿ ಮತ್ತೊಮ್ಮೆ ಪ್ರಧಾನಿಯಾಗ ಬೇಕಿದೆ ಎಂದು ಪರೋಕ್ಷವಾಗಿ ಯಡಿಯೂರಪ್ಪ ಅವರಿಗೆ ಸಲಹೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನಂತರ ಸುದ್ದಿಗಾರರ ಜತೆ ಮಾತನಾಡಿದ ಶ್ರೀಗಳು, ಲೋಕಸಭಾ ಚುನಾವಣೆ ಬಳಿಕ ರಾಜ್ಯದ ರಾಜಕೀಯ ಭವಿಷ್ಯ ನಿರ್ಧಾರವಾ ಗಲಿದ್ದು, ಫಲಿತಾಂಶ ಬರುವವರೆಗೆ ಎಲ್ಲರೂ ಸಹನೆಯಿಂದ ಇರಬೇಕು. ಯಾವುದೇ ವಾದ-ವಿವಾದ, ಚರ್ಚೆಗೆ ಯಾರೂ ಅವಕಾಶ ಕೊಡಬಾರದು. ಇದರಿಂದ ಇನ್ನಷ್ಟು ಗೊಂದಲಗಳು ಸೃಷ್ಟಿಯಾಗುತ್ತದೆಯೇ ವಿನಃ ಪ್ರಯೋಜನವಿಲ್ಲ ಎಂದು ಹೇಳಿದರು.