ನವದೆಹಲಿ :  ಮೈತ್ರಿ ಸರ್ಕಾರದ ವಿರುದ್ಧ ಅಸಮಾಧಾನಗೊಂಡಿರುವ ಗೋಕಾಕ್‌ನ ಕಾಂಗ್ರೆಸ್‌ ಶಾಸಕ ರಮೇಶ್‌ ಜಾರಕಿಹೊಳಿ ಅವರು ದೆಹಲಿಯಲ್ಲಿ ಬೀಡುಬಿಟ್ಟಿದ್ದು, ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಲು ಯತ್ನಿಸುತ್ತಿದ್ದಾರೆ ಎನ್ನಲಾಗಿದೆ. 

ಒಂದೊಮ್ಮೆ ಅಮಿತ್‌ ಶಾ ಅವರಿಂದ ಹಸಿರು ನಿಶಾನೆ ಸಿಕ್ಕರೆ, ರಮೇಶ್‌ ಜಾರಕಿಹೊಳಿ ಕಾಂಗ್ರೆಸ್‌ ಪಕ್ಷ ತೊರೆದು ಇನ್ನೆರಡು ದಿನಗಳಲ್ಲಿ ಬಿಜೆಪಿ ಸೇರಿದರೂ ಅಚ್ಚರಿಯಿಲ್ಲ ಎಂದು ಅವರ ಆಪ್ತಮೂಲಗಳು ತಿಳಿಸಿವೆ.

ತಮ್ಮ ಸಂಬಂಧಿ ದೇವೇಂದ್ರಪ್ಪ ಅಥವಾ ಲಖನ್‌ ಜಾರಕಿಹೊಳಿಗೆ ಬಳ್ಳಾರಿ ಕ್ಷೇತ್ರದ ಟಿಕೆಟ್‌ ಕೊಡಿಸಲು ಸಹ ರಮೇಶ್‌ ಜಾರಕಿಹೊಳಿ, ಬಿಜೆಪಿ ಹೈಕಮಾಂಡ್‌ನನ್ನು ಸಂಪರ್ಕಿಸಲು ಯತ್ನಿಸುತ್ತಿದ್ದಾರೆ. ಆದರೆ, ಸದಕ್ಕೆ ರಮೇಶ್‌ ಜಾರಕಿಹೊಳಿಗೆ, ಬಿಜೆಪಿ ನಾಯಕರ ಭೇಟಿ ಸಾಧ್ಯವಾಗಿಲ್ಲ ಎನ್ನಲಾಗಿದೆ.