ನವೆದೆಹಲಿ[ಮೇ.11]: ಮುಂಬೈನ ಮುಂಬಾದೇವಿ ದೇವಸ್ಥಾನಕ್ಕೆ ಭೇಟಿ ನೀಡಿದ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರ ಭಾವ ರಾಬರ್ಟ್‌ ವಾದ್ರಾ ಮುಜುಗರಕ್ಕೆ ಈಡಾದ ಘಟನೆ ಶುಕ್ರವಾರ ನಡೆದಿದೆ.

ವಾದ್ರಾ ಅವರು ದೇವಸ್ಥಾನ ಪ್ರವೇಶಿಸುತ್ತಿದ್ದಂತೆಯೇ ಅಲ್ಲಿ ನೆರೆದಿದ್ದ ಭಕ್ತರು ‘ಮೋದಿ ಮೋದಿ’ ಎಂದು ಘೋಷಣೆ ಕೂಗಿದ್ದಾರೆ. ಅಲ್ಲದೆ ‘ಮೋದಿ ಜಿಂದಾಬಾದ್‌’, ‘ಭಾರತ ಮಾತಾ ಕೀ ಜೈ’ ಎಂದೂ ಕೂಗಿದ್ದಾರೆ. ಪರಿಸ್ಥಿತಿ ಕೈಮೀರುತ್ತಿದ್ದ ಹಿನ್ನೆಲೆಯಲ್ಲಿ ಪೊಲೀಸರು ಆಗಮಿಸಿ ವಾದ್ರಾಗೆ ದರ್ಶನಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

ದೇವರ ಆಶೀರ್ವಾದ ಪಡೆಯಲು ಬಂದಿದ್ದೇನೆ. ನನಗೆ ರಾಜಕೀಯ ಬೇಕಾಗಿಲ್ಲ. ರಾಜಕೀಯ ಚಟುವಟಿಕೆಗಳನ್ನು ದೇಗುಲದಲ್ಲಿ ಮಾಡಬಾರದು ಎಂದು ವಾದ್ರಾ ಈ ಸಂದರ್ಭ ತಿಳಿಸಿದ್ದಾರೆ.

ಲೋಕಸಭೆ ಚುನಾವಣೆಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡ