ಕೊಡಗು[ಏ. 20]  ಮತ್ತೊಮ್ಮೆ ಮೋದಿ, ಮೋದಿಗಾಗಿ ಓಟುಕೊಡಿ ಎನ್ನುವ ಬಿಜೆಪಿಗರಿಗೆ ಕಲ್ಲಡ್ಕ ಪ್ರಭಾಕರ್ ಭಟ್ ತಿರುಗೇಟು ನೀಡಿದ್ದಾರೆ. ಸಂಘದಲ್ಲಿ ವ್ಯಕ್ತಿಪೂಜೆ ಸಲ್ಲ, ಸಂಘ ಒಬ್ಬ ವ್ಯಕ್ತಿಗಾಗಿ ಇಲ್ಲ.  ಒಬ್ಬ ವ್ಯಕ್ತಿಯನ್ನು ಮುಂದಿಟ್ಟುಕೊಂಡು ಚುನಾವಣೆ ಎದುರಿಸುತ್ತಿರುವುದು ಒಳ್ಳೆಯದಲ್ಲ ಎಂದು ಸಲಹೆ ನೀಡಿದ್ದಾರೆ.

ದೇಶದ ಮುಂದಿನ ಹಿತದೃಷ್ಟಿಯಿಂದ ಇದು ಒಳ್ಳೆಯ ಬೆಳವಣಿಗೆಯಲ್ಲ ಎಂದು ಮಡಿಕೇರಿಯಲ್ಲಿ ಸಂಘ ಪರಿವಾರದ ಮುಖಂಡ ಕಲ್ಕಡ ಪ್ರಭಾಕರ್ ಭಟ್ ಹೇಳಿಕೆ ನೀಡಿದ್ದಾರೆ.

ಲೋಕ ಸಮರಕ್ಕೂ ಮುನ್ನವೇ ಬೆಳಗಾವಿಯಲ್ಲಿ ರಾಜಕಾರಣದ ದಂಗಲ್

ದೇಶದಲ್ಲಿ ಈಗ ಸೈದ್ಧಾಂತಿಕ ನೆಲೆಗಟ್ಟಿನಲ್ಲಿ ಚುನಾವಣೆ ನಡೆಯುತ್ತಿದೆ. ಬಿಜೆಪಿಯಲ್ಲಿ ಪ್ರಧಾನಿ ಅಭ್ಯರ್ಥಿ ಅಂತ ಮೋದಿ ಇದ್ದಾರೆ. ಬೇರೆ ಪಕ್ಷಗಳಲ್ಲಿ ಪ್ರಧಾನಿ ಅಭ್ಯರ್ಥಿ ಅಂತ ಯಾರು ಇಲ್ಲ ಅನ್ನೋದು ಅಷ್ಟೇ ಸತ್ಯ. ಹಾಗೆಂದ ಮಾತ್ರಕ್ಕೆ ಒಬ್ಬ ವ್ಯಕ್ತಿಯ ಹಿಂದೆ ಹೋಗೋದು ದೇಶದ ಭವಿಷ್ಯದ ದೃಷ್ಟಿಯಿಂದ ಒಳ್ಳೆಯದಲ್ಲ ಎಂದು ಬಿಜೆಪಿ ನಾಯಕರ ಮೇಲೆ ಭಟ್ ಚಾಟಿ ಬೀಸಿದ್ದಾರೆ.

ದೇಶದಲ್ಲಿ ಏ.11ರಿಂದ ಮೇ.19ರವೆರೆಗೆ ಏಳು ಹಂತಗಳಲ್ಲಿ ಮತದಾನ. ಕರ್ನಾಟಕದಲ್ಲಿ ಏ.18 ಹಾಗೂ ಏ.23ರಂಧು ಎರಡು ಹಂತಗಳಲ್ಲಿ ಮತದಾನ. ಭಾರತದಲ್ಲಿ 543 ಲೋಕಸಭಾ ಕ್ಷೇತ್ರ. ಕರ್ನಾಟಕದಲ್ಲಿ 28.