ಕೊಚ್ಚಿ[ಮಾ.16]: ಸೋನಿಯಾ ಗಾಂಧಿ ಆಪ್ತ ಹಾಗೂ ಕಾಂಗ್ರೆಸ್‌ ವಕ್ತಾರ ಟಾಮ್‌ ವಡಕ್ಕನ್‌ ಅವರು ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ ಬೆನ್ನಲ್ಲೇ, ಕೇರಳ ಕಾಂಗ್ರೆಸ್‌ಗೆ ಮತ್ತೊಂದು ಮುಜುಗರ ಎದುರಾಗಿದೆ. ತಿರುವನಂತಪುರ ಕ್ಷೇತ್ರದ ಕಾಂಗ್ರೆಸ್‌ ಸಂಸದ ಶಶಿ ತರೂರ್‌ ಅವರ ಚಿಕ್ಕಮ್ಮ ಮತ್ತು ಚಿಕ್ಕಪ್ಪ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಶುಕ್ರವಾರ ಬಿಜೆಪಿ ಸೇರ್ಪಡೆ ಬಳಿಕ ಮಾತನಾಡಿದ ಶಶಿ ತರೂರ್‌ ಚಿಕ್ಕಮ್ಮ ಶೋಭನಾ ಶಶಿಕುಮಾರ್‌ ಹಾಗೂ ಚಿಕ್ಕಪ್ಪ ಶಶಿಕುಮಾರ್‌, ‘ನಾವು ಈ ಹಿಂದಿನಿಂದಲೂ ಬಿಜೆಪಿ ಬೆಂಬಲಿಗರೇ ಆಗಿದ್ದೆವು,’ ಎಂದು ಹೇಳಿದ್ದಾರೆ.

ಈ ಹಿಂದೆ ಪಾಲಕ್ಕಾಡ್‌ ಜಿಲ್ಲೆಯಲ್ಲಿ ಕಾಂಗ್ರೆಸ್‌ ಕಟ್ಟಾಬೆಂಬಲಿಗರಾಗಿದ್ದ ತರೂರ್‌ ಕುಟುಂಬಸ್ಥರು ಇದೀಗ ಬಿಜೆಪಿ ಕಡೆ ಮುಖ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಪಿ.ಎಸ್‌. ಶ್ರೀಧರನ್‌ ಪಿಳೈ ಅವರು ಹೇಳಿದರು.