ಮುಂಬೈ(ಮೇ.21): ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಪೂರ್ವ ಉತ್ತರ ಪ್ರದೇಶದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವಿರತವಾಗಿ ದುಡಿದಿದ್ದಾರೆ ಎಂದು ಶಿವಸೇನೆ ಹೊಗಳಿದೆ.

ಕೇಂದ್ರದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ಖಚಿತ ಎಂದು ಹೇಳಿರುವ ಶಿವಸೇನೆ, ರಾಹುಲ್ ಮತ್ತು ಪ್ರಿಯಾಂಕಾ ಅವಿರತವಾಗಿ ಶ್ರಮಿಸಿದ್ದು ಕಾಂಗ್ರೆಸ್ ಪ್ರಮುಖ ವಿರೋಧ ಪಕ್ಷವಾಗಿ ಹೊರಹೊಮ್ಮಲಿದೆ ಎಂದು ಭರವಸೆ ವ್ಯಕ್ತಪಡಿಸಿದೆ.

ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕ ಸೀಟು ಗಳಿಸಲಿ ಎಂದು ಹಾರೈಸಿರುವ ಶಿವಸೇನೆ, ಅವರ ಪರಿಶ್ರಮಕ್ಕೆ ತಕ್ಕ ಫಲ ಸಿಗಲಿ ಎಂಬುದು ತನ್ನ ಆಶಯ ಎಂದು ತಿಳಿಸಿದೆ.