ಬೆಂಗಳೂರು : ಲೋಕಸಭಾ ಚುನಾವಣೆಗೆ ಶಿವಮೊಗ್ಗ ಕ್ಷೇತ್ರದಿಂದ ಕಣಕ್ಕೆ ಇಳಿದಿರುವ ಬಿ.ಎಸ್.ಯಡಿಯೂರಪ್ಪ ಪುತ್ರ ಬಿ.ವೈ ರಾಘವೇಂದ್ರ ಇಂದು [ಗುರುವಾರ] ನಾಮಪತ್ರ ಸಲ್ಲಿಸಿದ್ದು, ಶಿವಮೊಗ್ಗಕ್ಕೆ ತೆರಳಬೇಕಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಬೆಂಗಳೂರಿನಲ್ಲೇ ಉಳಿದರು.

ಬಿಜೆಪಿ ಅಭ್ಯರ್ಥಿ ರಾಘವೇಂದ್ರ ನಾಮಪತ್ರ ಸಲ್ಲಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹಾಗೂ ಬಿಜೆಪಿ ಹಿರಿಯ ನಾಯಕ ಎಸ್.ಎಂ ಕೃಷ್ಣ ಅವರು ತೆರಳಬೇಕಿದ್ದು, ಆದರೆ ಇಬ್ಬರು ನಾಯಕರ ಪ್ರವಾಸ   ಹೆಲಿಕಾಪ್ಟರ್  ತಾಂತ್ರಿಕ ತೊಂದರೆಯಿಂದ  ಮೊಟಕುಗೊಳಿಸುವಂತಾಯ್ತು.

ತಾಂತ್ರಿಕ ತೊಂದರೆಯಿಂದ  ಹೆಲಿಕಾಪ್ಟರ್ ಮೇಲೆ ಹಾರದೇ ಎಸ್.ಎಂ.ಕೃಷ್ಣ ಹಾಗೂ ಯಡಿಯೂರಪ್ಪ ತೆರಳದ ಹಿನ್ನೆಲೆ ಅವರ ಅನುಪಸ್ಥಿತಿಯಲ್ಲಿ ರಾಘವೇಂದ್ರ ನಾಮಪತ್ರ ಸಲ್ಲಿಸಿದ್ದಾರೆ. 

ಬಿಜೆಪಿ ನಾಯಕ ಈಶ್ವರಪ್ಪ ಹಾಗೂ ಸಾಗರ ಶಾಸಕ ಹರತಾಳು ಹಾಲಪ್ಪ ಉಪಸ್ಥಿತಿಯಲ್ಲಿ ರಾಘವೇಂದ್ರ ನಾಮಪತ್ರ ಸಲ್ಲಿಸಿದ್ದಾರೆ.
 

ಮತದಾನ ನಮ್ಮ ಹಕ್ಕು... ಪ್ರಜಾಪ್ರಭುತ್ವದ ಉತ್ಸವವನ್ನು ಯಶಸ್ವಿಗೊಳಿಸೋಣ...

ದೇಶದಲ್ಲಿ ಏ.11 ರಿಂದ ಮೇ 19ರವರೆಗೆ ಏಳು ಹಂತಗಳಲ್ಲಿ ಮತದಾನ ನಡೆಯಲಿದ್ದು, ಕರ್ನಾಟಕದಲ್ಲಿ ಏ.18 ಹಾಗೂ ಏ.23ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. 543 ಲೋಕಸಭಾ ಕ್ಷೇತ್ರಗಳಿಗೆ ನಡೆ