ಶಿವಮೊಗ್ಗ, (ಏ.18): ಕರ್ನಾಟಕದಲ್ಲಿಂದು ಮೊದಲನೇ ಹಂತದ ಮತದಾನ ನಡೆದಿದ್ದು, 2ನೇ ಹಂತದ ಮತದಾನಕ್ಕೆ ದಿನಗಣನೇ ಆರಂಭವಾಗಿದೆ. ಇದರ ಮಧ್ಯೆ ಶಿವಮೊಗ್ಗ ಲೋಕಸಭಾ ಪಕ್ಷೇತರ ಅಭ್ಯರ್ಥಿ ಕಾಣೆಯಾಗಿದ್ದಾರೆ.

 ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಆಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಮೊಹಮ್ಮದ್ ಯೂಸುಫ್ ಖಾನ್ ನಾಪತ್ತೆಯಾಗಿದ್ದು, ಕುಟುಂಬಸ್ಥರು ಆತಂಕಗೊಂಡಿದ್ದಾರೆ.

ಕಳೆದ ರಾತ್ರಿ (ಬುಧವಾರ) 7 ಗಂಟೆಗೆ ಮನೆಯಿಂದ ಹೋದವರು ಮರಳಿ ಬಂದಿಲ್ಲ. ಇದ್ರಿಂದ ಗಾಬರಿಗೊಂಡಿರುವ ಕುಟುಂಬಸ್ಥರು ಶಿವಮೊಗ್ಗದ ತುಂಗಾನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ  ಇದೇ ಏ.23ರಂದು ಮತದಾನ ನಡೆಯಲಿದೆ. ಮತದಾನಕ್ಕೆ ಕಲವೇ ದಿನಗಳು ಬಾಕಿ ಇರುವಾಗಲೇ ದಿಢೀರ್ ನಾಪತ್ತೆಯಾಗಿರುವುದು ಕುಟುಂಬಸ್ಥರಲ್ಲಿ ಆತಂಕ ಮನೆ ಮಾಡಿದೆ.

2018ರ ವಿಧಾನಸಭಾ ಚುನಾವಣೆ, ಹಾಗೂ ಕಳೆದ ಲೋಕಸಭಾ ಕ್ಷೇತ್ರದ ಉಪಚುನಾವಣೆ, ಮಹಾನಗರ ಪಾಲಿಕೆ ಎಲೆಕ್ಷನ್‌ಗೆ ಮೊಹಮ್ಮದ್ ಯೂಸುಫ್ ಖಾನ್ ಸ್ಪರ್ಧೆ ಮಾಡಿದ್ದರು.

ದೇಶದಲ್ಲಿ ಏ.11ರಿಂದ ಮೇ.19ರವೆರೆಗೆ ಏಳು ಹಂತಗಳಲ್ಲಿ ಮತದಾನ. ಕರ್ನಾಟಕದಲ್ಲಿ ಏ.18 ಹಾಗೂ ಏ.23ರಂದು ಎರಡು ಹಂತಗಳಲ್ಲಿ ಮತದಾನ. ಭಾರತದಲ್ಲಿ 543 ಲೋಕಸಭಾ ಕ್ಷೇತ್ರ, ಕರ್ನಾಟಕದಲ್ಲಿ 28.